ಇಸ್ಲಾಮಾಬಾದ್: ಪಾಕಿಸ್ತಾನದ ಲಾಹೋರ್‌ನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಆವರಣದಲ್ಲಿ ಬುಧವಾರ ನಡೆದ ಗುಂಡಿನ ದಾಳಿಯಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ.
ಲಾಹೋರ್‌ನ ಅಲ್ಲಮಾ ಇಕ್ಬಾಲ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಅಂತರರಾಷ್ಟ್ರೀಯ ಆಗಮನ ವಿಭಾಗದಲ್ಲಿ ಅಪರಿಚಿತ ವ್ಯಕ್ತಿಯೊಬ್ಬ ಪಿಸ್ತೂಲ್‌ನಿಂದ ಗುಂಡು ಹಾರಿಸಿದ್ದಾಗಿ ವಿಮಾನ ನಿಲ್ದಾಣ ಭದ್ರತಾ ಪಡೆ ತಿಳಿಸಿದೆ ಎಂದು ಕ್ಸಿನ್‌ಹುವಾ ಸುದ್ದಿ ಸಂಸ್ಥೆ ವರದಿ ಮಾಡಿದೆ.
ಗುಂಡಿನ ದಾಳಿಯಲ್ಲಿ ಭಾಗಿಯಾದ ಇಬ್ಬರು ಆರೋಪಿಗಳನ್ನು ವಿಮಾನ ನಿಲ್ದಾಣ ಪೊಲೀಸರು ಬಂಧಿಸಿದ್ದು, ವೈಯಕ್ತಿಕ ದ್ವೇಷದಿಂದಾಗಿ ಗುಂಡಿನ ದಾಳಿ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಮೃತರಿಬ್ಬರೂ ರಾಜಕೀಯ ಮುಖಂಡರ ಕೊಲೆ ಪ್ರಕರಣದಲ್ಲಿ ಭಾಗಿದ್ದು, ಪೊಲೀಸ್ ತನಿಖೆಯನ್ನು ಎದುರಿಸುತ್ತಿದ್ದರು ಎನ್ನಲಾಗಿದೆ.