ಬ್ರಿಟನ್ ಪ್ರಧಾನಿ ಬೊರಿಸ್ ಜಾನ್ಸನ್ ರಾಜೀನಾಮೆ ಸಲ್ಲಿಸುವ ಸಾಧ್ಯತೆ!!

Boris Johnson: ಸಾಕಷ್ಟು ಹೈಡ್ರಾಮಾ ಮತ್ತು ಸತತ ರಾಜೀನಾಮೆಗಳ ನಂತರ, ಬ್ರಿಟನ್ ಪ್ರಧಾನಿ ಬೋರಿಸ್ ಜಾನ್ಸನ್ ಅವರು ಬ್ರಿಟಿಷ್ ಪ್ರಧಾನಿ ಸ್ಥಾನಕ್ಕೆ ರಾಜೀನಾಮೆ ಘೋಷಿಸಲು ಸಿದ್ಧರಾಗಿದ್ದಾರೆ ಎಂದು ಬ್ರಿಟಿಷ್ ಮಾಧ್ಯಮಗಳು ವರದಿ ಮಾಡಿವೆ.

Written by - Chetana Devarmani | Last Updated : Jul 7, 2022, 03:47 PM IST
  • ಬ್ರಿಟನ್ ಪ್ರಧಾನಿ ಬೊರಿಸ್ ಜಾನ್ಸನ್ ರಾಜೀನಾಮೆ ಸಲ್ಲಿಸುವ ಸಾಧ್ಯತೆ!!
  • ಬೋರಿಸ್ ಜಾನ್ಸನ್ ಇಂದು ಕನ್ಸರ್ವೇಟಿವ್ ಪಕ್ಷದ ನಾಯಕತ್ವಕ್ಕೆ ರಾಜೀನಾಮೆ?
  • ಸುಮಾರು 40 ಜನ ಸಚಿವರು ಮತ್ತು ಆಪ್ತರು ರಾಜೀನಾಮೆ
ಬ್ರಿಟನ್ ಪ್ರಧಾನಿ ಬೊರಿಸ್ ಜಾನ್ಸನ್ ರಾಜೀನಾಮೆ ಸಲ್ಲಿಸುವ ಸಾಧ್ಯತೆ!!  title=
ಬೋರಿಸ್ ಜಾನ್ಸನ್

ಲಂಡನ್ (ಯುಕೆ): ಸಾಕಷ್ಟು ಹೈಡ್ರಾಮಾ ಮತ್ತು ಸತತ ರಾಜೀನಾಮೆಗಳ ನಂತರ, ಬ್ರಿಟನ್ ಪ್ರಧಾನಿ ಬೋರಿಸ್ ಜಾನ್ಸನ್ ಅವರು ಬ್ರಿಟಿಷ್ ಪ್ರಧಾನಿ ಸ್ಥಾನಕ್ಕೆ ರಾಜೀನಾಮೆ ಘೋಷಿಸಲು ಸಿದ್ಧರಾಗಿದ್ದಾರೆ ಎಂದು ಬ್ರಿಟಿಷ್ ಮಾಧ್ಯಮಗಳು ವರದಿ ಮಾಡಿವೆ. ಕಳೆದ ಎರಡು ಗಂಟೆಗಳಲ್ಲಿ ಇಬ್ಬರು ರಾಜ್ಯ ಕಾರ್ಯದರ್ಶಿಗಳು ಸೇರಿದಂತೆ ಎಂಟು ಸಚಿವರು ರಾಜೀನಾಮೆ ನೀಡಿರುವುದರ ಪರಿಣಾಮ ಜಾನ್ಸನ್ ರಾಜೀನಾಮೆ ಸಲ್ಲಿಕೆಗೆ ಮುಂದಾಗಿದ್ದಾರೆ. 

ಇದನ್ನೂ ಓದಿ: ಡಾ.ವೀರೇಂದ್ರ ಹೆಗ್ಗಡೆ, ಪಿಟಿ ಉಷಾ ಸೇರಿ ನಾಲ್ವರು ರಾಜ್ಯಸಭೆಗೆ ಆಯ್ಕೆ!

"ಬೋರಿಸ್ ಜಾನ್ಸನ್ ಇಂದು ಕನ್ಸರ್ವೇಟಿವ್ ಪಕ್ಷದ ನಾಯಕತ್ವಕ್ಕೆ ರಾಜೀನಾಮೆ ನೀಡಲಿದ್ದಾರೆ" ಎಂದು ಬಿಬಿಸಿಯ ರಾಜಕೀಯ ಸಂಪಾದಕ ಕ್ರಿಸ್ ಮೇಸನ್ ಹೇಳಿದ್ದಾರೆ. ಬೋರಿಸ್ ಜಾನ್ಸನ್ 40 ಕ್ಕೂ ಹೆಚ್ಚು ಮಂತ್ರಿಗಳು ತಮ್ಮ ಸರ್ಕಾರವನ್ನು ತೊರೆದ ನಂತರ ಈ ನಿರ್ಧಾರ ತೆಗೆದುಕೊಳ್ಳಲು ಮುಂದಾಗಿದ್ದಾರೆ ಎಂದು ಹೇಳಲಾಗ್ತಿದೆ. ಬೋರಿಸ್ ಜಾನ್ಸನ್ ಅವರು ಟೋರಿ ನಾಯಕತ್ವದಿಂದ ಕೆಳಗಿಳಿಯಲು ಒಪ್ಪಿಕೊಂಡಿದ್ದಾರೆ ಮತ್ತು ಹೊಸ ನಾಯಕನನ್ನು ಆಯ್ಕೆ ಮಾಡುವವರೆಗೆ ಅವರು ಪ್ರಧಾನಿಯಾಗಿ ಉಳಿಯುತ್ತಾರೆ ಎಂದು ಕೆಲವು ವರದಿಗಳು ತಿಳಿಸಿವೆ ಎಂದು ಡೌನಿಂಗ್ ಸ್ಟ್ರೀಟ್ ಮಾಹಿತಿ ನೀಡಿದೆ.

ಇದನ್ನೂ ಓದಿ: Numerology: ಈ ದಿನಾಂಕಗಳಲ್ಲಿ ಜನಿಸಿದವರನ್ನು ಕಣ್ಮುಚ್ಚಿ ನಂಬಬಹುದು

ಜಾನ್ಸನ್‌ ಸಂಪುಟದ ನಾಲ್ವರು ಸಚಿವರು ಸೇರಿದಂತೆ ಸುಮಾರು 40 ಜನ ಸಚಿವರು ಮತ್ತು ಆಪ್ತರು ರಾಜೀನಾಮೆ ಸಲ್ಲಿಸಿದ ಬಳಿಕ ಪ್ರಧಾನಿ ಸ್ಥಾನದಿಂದ ಕೆಳಗಿಳಿಯಲು ನಿರ್ಧರಿಸಿದ್ದಾರೆ. ಈ ಹಿನ್ನೆಲೆ ಅವರು ರಾಜೀನಾಮೆ ನೀಡುವ ಸಾಧ್ಯತೆಯಿದೆ ಎಂದು ಎಪಿ ಸುದ್ದಿ ಸಂಸ್ಥೆ ವರದಿ ಮಾಡಿದೆ. 

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News