ಭಾರತ ಅಮೆರಿಕಾದ ಬಲಿಷ್ಠ ಪಾಲುದಾರ ಎಂದ ಯುಎಸ್ ಅಧ್ಯಕ್ಷ ಬಿಡೆನ್
ಭಾರತವು ಅಮೆರಿಕಾದ ಪ್ರಬಲ ಪಾಲುದಾರ ಈಗ ಜಿ 20 ಅಧ್ಯಕ್ಷರಾಗಿರುವ ಸ್ನೇಹಿತ ಪ್ರಧಾನಿ ಮೋದಿ ಅವರನ್ನು ಬೆಂಬಲಿಸಲು ಎದುರು ನೋಡುತ್ತಿದ್ದೇನೆ ಎಂದು ಅಮೆರಿಕಾದ ಅಧ್ಯಕ್ಷ ಜೋ ಬಿಡೆನ್ ಶುಕ್ರವಾರ ಹೇಳಿದ್ದಾರೆ.
ನವದೆಹಲಿ: ಭಾರತವು ಅಮೆರಿಕಾದ ಪ್ರಬಲ ಪಾಲುದಾರ ಈಗ ಜಿ 20 ಅಧ್ಯಕ್ಷರಾಗಿರುವ ಸ್ನೇಹಿತ ಪ್ರಧಾನಿ ಮೋದಿ ಅವರನ್ನು ಬೆಂಬಲಿಸಲು ಎದುರು ನೋಡುತ್ತಿದ್ದೇನೆ ಎಂದು ಅಮೆರಿಕಾದ ಅಧ್ಯಕ್ಷ ಜೋ ಬಿಡೆನ್ ಶುಕ್ರವಾರ ಹೇಳಿದ್ದಾರೆ.
ಇನ್ನು ಮುಂದುವರೆದು ಬಿಡೆನ್ 'ಹವಾಮಾನ, ಶಕ್ತಿ ಮತ್ತು ಆಹಾರ ಬಿಕ್ಕಟ್ಟುಗಳಂತಹ ಹಂಚಿಕೆಯ ಸವಾಲುಗಳನ್ನು ನಿಭಾಯಿಸುವಾಗ ನಾವು ಒಟ್ಟಾಗಿ ಸುಸ್ಥಿರ ಮತ್ತು ಅಂತರ್ಗತ ಬೆಳವಣಿಗೆಯನ್ನು ಮುನ್ನಡೆಸುತ್ತೇವೆ" ಎಂದು ಅವರು ಹೇಳಿದ್ದಾರೆ.
ಇದನ್ನೂ ಓದಿ: ಚಿಲುಮೆ ಅವ್ಯವಹಾರ ಪ್ರಕರಣದಲ್ಲಿ ಬಿಬಿಎಂಪಿ ಅಧಿಕಾರಿಗಳು ಶಾಮೀಲಾಗಿಲ್ಲ
ಇದಕ್ಕೂ ಮೊದಲು ಪ್ರಧಾನಿ ಮೋದಿ ಜಿ20 ಅಧ್ಯಕ್ಷತೆ ಯನ್ನು ವಹಿಸಿಕೊಂಡು ಟ್ವೀಟ್ ಮಾಡಿದ ಅವರು “ಇಂದು, ಭಾರತವು ತನ್ನ G-20 ಅಧ್ಯಕ್ಷತೆಯನ್ನು ಪ್ರಾರಂಭಿಸುತ್ತಿರುವಾಗ, ಜಾಗತಿಕ ಒಳಿತಿಗಾಗಿ ಒಳಗೊಳ್ಳುವ, ಮಹತ್ವಾಕಾಂಕ್ಷೆಯ, ಕ್ರಿಯಾ-ಆಧಾರಿತ ಮತ್ತು ನಿರ್ಣಾಯಕ ಕಾರ್ಯಸೂಚಿಯ ಆಧಾರದ ಮೇಲೆ ಮುಂಬರುವ ವರ್ಷದಲ್ಲಿ ನಾವು ಹೇಗೆ ಕೆಲಸ ಮಾಡಲು ಬಯಸುತ್ತೇವೆ ಎಂಬುದರ ಕುರಿತು ಕೆಲವು ಆಲೋಚನೆಗಳನ್ನು ಬರೆಯಲಾಗಿದೆ” ಎಂದು ಅವರು ತಮ್ಮ ಟ್ವೀಟ್ ನಲ್ಲಿ ಉಲ್ಲೇಖಿಸಿದ್ದಾರೆ.
ಕನ್ನಡಿಗರ ಅಭಿವೃದ್ಧಿ, ರಕ್ಷಣೆಗೆ ಸರ್ಕಾರ ಬದ್ಧ: ಸಿಎಂ ಬೊಮ್ಮಾಯಿ
ಜಿ 20 ಪ್ರಪಂಚದ ಪ್ರಮುಖ ಅಭಿವೃದ್ಧಿ ಹೊಂದಿದ ಮತ್ತು ಅಭಿವೃದ್ಧಿ ಹೊಂದುತ್ತಿರುವ ರಾಷ್ಟ್ರಗಳ ಅಂತರಸರ್ಕಾರಿ ವೇದಿಕೆಯಾಗಿದೆ.ಇದು ಅರ್ಜೆಂಟೀನಾ, ಆಸ್ಟ್ರೇಲಿಯಾ, ಬ್ರೆಜಿಲ್, ಕೆನಡಾ, ಚೀನಾ, ಫ್ರಾನ್ಸ್, ಜರ್ಮನಿ, ಭಾರತ, ಇಂಡೋನೇಷ್ಯಾ, ಇಟಲಿ, ಜಪಾನ್, ರಿಪಬ್ಲಿಕ್ ಆಫ್ ಕೊರಿಯಾ, ಮೆಕ್ಸಿಕೋ, ರಷ್ಯಾ, ಸೌದಿ ಅರೇಬಿಯಾ, ದಕ್ಷಿಣ ಆಫ್ರಿಕಾ, ಟರ್ಕಿ, ಯುಕೆ, ಯುಎಸ್ ಮತ್ತು ಯುರೋಪಿಯನ್ ಯೂನಿಯನ್ ಅನ್ನು ಒಳಗೊಂಡಿದೆ.ಬೆಳಗಾವಿಗೆ ಮಹಾರಾಷ್ಟ್ರ ಸಚಿವರ ಭೇಟಿ ಸರಿಯಲ್ಲ : ಮಹಾ ಸರ್ಕಾರಕ್ಕೆ ಸಿಎಂ ಸಂದೇಶ ರವಾನೆ
ಒಟ್ಟಾರೆಯಾಗಿ, ಅವರು ಜಾಗತಿಕ ಒಟ್ಟು ದೇಶೀಯ ಉತ್ಪನ್ನದ ಶೇ 80 ರಷ್ಟು, ಅಂತರರಾಷ್ಟ್ರೀಯ ವ್ಯಾಪಾರದ ಶೇ 75 ಮತ್ತು ವಿಶ್ವದ ಜನಸಂಖ್ಯೆಯ ಮೂರನೇ ಎರಡರಷ್ಟು ಭಾಗವನ್ನು ಹೊಂದಿದೆ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.