India Pakistan ಕದನ ವಿರಾಮದ ಬಗ್ಗೆ ಡೊನಾಲ್ಡ್ ಟ್ರಂಪ್ ಬಿಗ್ ಸ್ಟೇಟ್ಮೆಂಟ್..!

India Pakistan Conflict: ಭಾರತ ಪಾಕಿಸ್ತಾನದ ನಡುವಿನ ಉದ್ವಿಗ್ನತೆ ತಣಿಸಲು ರಾಜಿ ಸಂಧಾನ ನಡೆಸಿದ್ದ ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇಂಡೋ-ಪಾಕ್ ಕದನ ವಿರಾಮದ ಕುರಿತು ಮಹತ್ವದ ಹೇಳಿಕೆ ನೀಡಿದ್ದಾರೆ. 

Written by - Yashaswini V | Last Updated : May 11, 2025, 11:37 AM IST
  • ಭಾರತ ಪಾಕಿಸ್ತಾನದ ನಡುವೆ ಉದ್ವಿಗ್ನತೆ
  • ಉಭಯ ರಾಷ್ಟ್ರಗಳ ನಡುವೆ ರಾಜಿ ಸಂಧಾನ ಮಾಡಿ ಯಶಸ್ವಿಯಾಗಿದ್ದ ಟ್ರಂಪ್
  • ಇದೀಗ ಕದನ ವಿರಾಮ ಮತ್ತು ಕಾಶ್ಮೀರಕ್ಕೆ ಸಂಬಂಧಿಸಿದಂತೆ ದೊಡ್ಡ ಹೇಳಿಕೆ ನೀಡಿರುವ ಟ್ರಂಪ್
India Pakistan ಕದನ ವಿರಾಮದ ಬಗ್ಗೆ ಡೊನಾಲ್ಡ್ ಟ್ರಂಪ್ ಬಿಗ್ ಸ್ಟೇಟ್ಮೆಂಟ್..!

India Pakistan Ceasefire: ಭಾರತ ಮತ್ತು ಪಾಕಿಸ್ತಾನದ ನಡುವಿನ ಯುದ್ದ ಪರಿಸ್ಥಿತಿಯನ್ನು ತಣಿಸಲು ಮಹತ್ವದ ಪಾತ್ರವಹಿಸಿದ್ದ ಯುನೈಟೆಡ್ ಸ್ಟೇಟ್ಸ್ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇದೀಗ ಇಂಡಿಯಾ ಪಾಕಿಸ್ತಾನ್ ಕದನ ವಿರಾಮಕ್ಕೆ ಸಂಬಂಧಿಸಿದಂತೆ ಬಿಗ್ ಸ್ಟೇಟ್ಮೆಂಟ್ ನೀಡಿದ್ದು, "ಭಾರತ ಮತ್ತು ಪಾಕಿಸ್ತಾನದ ಬಲವಾದ ಮತ್ತು ಅಚಲವಾದ ಶಕ್ತಿಶಾಲಿ ನಾಯಕತ್ವವು ಯುದ್ಧವನ್ನು ನಿಲ್ಲಿಸುವ ಸಮಯ ಬಂದಿದೆ ಎಂದು ಸಂಪೂರ್ಣವಾಗಿ ಅರ್ಥಮಾಡಿಕೊಳ್ಳುವ ಶಕ್ತಿಯನ್ನು ಹೊಂದಿತ್ತು" ಎಂದಿದ್ದಾರೆ. 

ತಮ್ಮ ಟ್ರೂತ್ ಸೋಷಿಯಲ್ ಮೀಡಿಯಾ ಪ್ಲಾಟ್‌ಫಾರ್ಮ್‌ನಲ್ಲಿ ಈ ಕುರಿತಂತೆ ಪೋಸ್ಟ್ ಮಾಡಿರುವ ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್,  "ಹೆಚ್ಚುವರಿಯಾಗಿ, 'ಸಾವಿರ ವರ್ಷಗಳ' ನಂತರ, ಕಾಶ್ಮೀರಕ್ಕೆ ಸಂಬಂಧಿಸಿದಂತೆ ಪರಿಹಾರವನ್ನು ಕಂಡು ಕೊಳ್ಳಲು ನಾನು ನಿಮ್ಮಿಬ್ಬರೊಂದಿಗೆ (ಭಾರತ-ಪಾಕಿಸ್ತಾನ) ಕೆಲಸ ಮಾಡುತ್ತೇನೆ" ಎಂದಿದ್ದಾರೆ. ಇದರೊಂದಿಗೆ "ಭಾರತ ಮತ್ತು ಪಾಕಿಸ್ತಾನ ರಾಷ್ಟ್ರಗಳೊಂದಿಗೆ ಯುಎಸ್ ವ್ಯಾಪಾರವನ್ನು ಗಣನೀಯವಾಗಿ ಹೆಚ್ಚಿಸುವ" ಭರವಸೆ ನೀಡಿದ್ದಾರೆ. 

ಇದನ್ನೂ ಓದಿ- India Pakistan Ceasefire Live Updates: ಬೆಳ್ಳಂಬೆಳಗ್ಗೆ ಅಲರ್ಟ್‌ ಘೋಷಣೆ.. ಮನೆ, ಬಾಲ್ಕನಿ, ರಸ್ತೆಗೆ ಬಾರದಂತೆ ಸೂಚನೆ

ವಾಸ್ತವವಾಗಿ, ಏಪ್ರಿಲ್ 22 ರಂದು ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ ಭಾರತ ಮತ್ತು ಪಾಕಿಸ್ತಾನದ ನಡುವಿನ ಉದ್ವಿಗ್ನತೆ ಹೆಚ್ಚಾಗಿತ್ತು. ಒಟ್ಟು 26 ಜನರನ್ನು ಬಲಿ ಪಡೆದಿದ್ದ ಭಯೋತ್ಪಾದಕರಿಗೆ ತಕ್ಕ ಉತ್ತರ ನೀಡಲು ಭಾರತೀಯ ಸೇನೆ 'ಆಪರೇಷನ್ ಸಿಂಧೂರ್' ಅಡಿಯಲ್ಲಿ ಕ್ಷಿಪಣಿ ದಾಳಿ ನಡೆಸಿ ಭಯೋತ್ಪಾದಕರ ನೆಲೆಗಳನ್ನು ಧ್ವಂಸ ಮಾಡಿತ್ತು. ಈ ಬಗ್ಗೆ ಮಾಹಿತಿ ನೀಡಿದ್ದ ರಕ್ಷಣಾ ಸಚಿವ ರಾಜನಾಥ್ ಸಿಂಗ್, ಈ ದಾಳಿಯಲ್ಲಿ 100ಕ್ಕೂ ಹೆಚ್ಚು ಭಯೋತ್ಪಾದಕರು ಮೃತಪಟ್ಟಿದಾರೆ ಎಂದು ಹೇಳಿದ್ದರು. ಈ ಬೆಳವಣಿಗೆಯ ಬಳಿಕ ಪಾಕಿಸ್ತಾನವು ಗಡಿ ಪ್ರದೇಶದಲ್ಲಿರುವ ಹಲವು ಭಾರತೀಯ ನಗರಗಳ ಕಡೆಗೆ  ಸಶಸ್ತ್ರ ಡ್ರೋನ್‌ಗಳನ್ನು ಹಾರಿಸುವ ಮೂಲಕ ಪ್ರತೀಕಾರ ತೀರಿಸಿಕೊಳ್ಳಲು ನಿರಂತರವಾಗಿ ಯತ್ನಿಸುತ್ತಲೇ ಇತ್ತು. ಇದಕ್ಕೆ ತಕ್ಕ ಪ್ರತ್ಯುತ್ತರವನ್ನು ನೀಡಲು ಸಫಲವಾಗಿದ್ದ ಭಾರತೀಯ ವಾಯುಪಡೆ ಪಾಕಿಸ್ತಾನದ ಪ್ರಯತ್ನಗಳನ್ನು ವಿಫಲಗೊಳಿಸಿತ್ತು. ಆದಾಗ್ಯೂ, ಭಾರತ ಪಾಕಿಸ್ತಾನಗಳ ನಡುವೆ ದಾಳಿ-ಪ್ರತಿದಾಳಿಗಳು ಮುಂದುವರೆದಿದ್ದವು. 

ಭಾರತ-ಪಾಕಿಸ್ತಾನ ಉದ್ವಿಗ್ನತೆ ನಡುವೆ ಕದನ ವಿರಾಮ ಘೋಷಿಸಿದ್ದ ಟ್ರಂಪ್: 
ಭಾರತ ಪಾಕಿಸ್ತಾನದ ನಡುವೆ ಉದ್ವಿಗ್ನತೆ ಮುಂದುವರೆದಂತೆ ಮಧ್ಯಸ್ಥಿಕೆ ವಹಿಸಿದ್ದ ಯುಎಸ್ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಇಂಡಿಯಾ-ಪಾಕಿಸ್ತಾನ್ ನಡುವೆ "ಪೂರ್ಣ ಮತ್ತು ತಕ್ಷಣದ ಕದನ ವಿರಾಮ"ವನ್ನು ಘೋಷಿಸಿದ್ದರು. ಈ ಬೆಳವಣಿಗೆಗಳ ಬೆನ್ನಲ್ಲೇ ಉಭಯ ರಾಷ್ಟ್ರಗಳ ನಾಯಕರು ಕದನ ವಿರಾಮವನ್ನು ದೃಢಪಡಿಸಿದರು. 

ಇದನ್ನೂ ಓದಿ- ಸುಳ್ಳು ಸುದ್ದಿಗಳ ಬಗ್ಗೆ ರಕ್ಷಣಾ ಇಲಾಖೆ ಎಚ್ಚರಿಕೆ: ಶಾಂತಿಯುತವಾಗಿರಿ ಎಂದು ಜನರಿಗೆ ಜೆ‌ಕೆ ಸಂದೇಶ

ನಾಯಿ ಬಾಲಕ್ಕೆ ದಬ್ಬೆ ಕಟ್ಟಿದರೂ ಅದು ನೆಟ್ಟಗಾದೀತೇ ಎಂಬಂತೆ ಕದನ ವಿರಾಮ ಘೋಷಿಸಿದ ಕೆಲ ಗಂಟೆಗಳನ್ನು ಪಾಕಿಸ್ತಾನ ಹಲವು ಬಾರಿ ಕದನ ವಿರಾಮವನ್ನು ಉಲ್ಲಂಘನೆ ಮಾಡಿತ್ತು. ಗಡಿ ಭಾಗಗಳಲ್ಲಿನ ಹಲವು ಪ್ರದೇಶಗಳಲ್ಲಿ ಡ್ರೋನ್‌ಗಳ ಮೂಲಕ ಮತ್ತೆ ದಾಳಿಗೆ ಪ್ರಚೋದನೆಯನ್ನು ಮುಂದುವರೆಸಿತ್ತು ಎಂಬುದು ಗಮನಾರ್ಹ ಸಂಗತಿಯಾಗಿದೆ. 

ಇತ್ತೀಚಿನ ಅಪ್ಡೇಟ್ ಸುದ್ದಿಗಳನ್ನು ವೀಕ್ಷಿಸಲು ನಮ್ಮ Youtube Link - https://www.youtube.com/@ZeeKannadaNews/featured ಸಬ್ ಸ್ಕ್ರೈಬ್ಆಗಿರಿ. 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

ನಿಮ್ಮ ಜೀ ಕನ್ನಡ ನ್ಯೂಸ್‌ ಈಗ: Zee5ನಲ್ಲೂ ಜೀ ಕನ್ನಡ ನ್ಯೂಸ್‌ ಲಭ್ಯ 
Sun Direct-292 
TATA PLAY- 1664 
JIO TV-1334 
NXT Digital-30 
IN-CABLE-30 
U-Digital-162 
GTPL-17 
Rockline Telecommunications ಬೆಂಗಳೂರು-42
 V4 Digital Infotech ಮಂಗಳೂರು-628
Malanad infotech Pvt Ltd-56 
Metrocast ಬೆಂಗಳೂರು, ಬೆಳಗಾವಿ-830 ಲಭ್ಯ

Trending News