ವಾಷಿಂಗ್ಟನ್ : ಜಾಗತಿಕ ತಾಪಮಾನ ಏರಿಕೆಯ ಬಗ್ಗೆ ಇಡೀ ಜಗತ್ತು ಚಿಂತೆಗೀಡಾಗಿದೆ. ನಿರಂತರವಾಗಿ ಹೆಚ್ಚುತ್ತಿರುವ ಜಾಗತಿಕ ತಾಪಮಾನ  ನಿಜಕ್ಕೂ ಎಚ್ಚರಿಕೆಯ ಕರೆಗಂಟೆಯಾಗಿದೆ. ಈ ಹಿನ್ನೆಲೆಯಲ್ಲಿ  ಗ್ಲೋಬಲ್  ವಾರ್ಮಿಂಗ್ (Globl warming) ಬಗ್ಗೆ ಚರ್ಚೆಯನ್ನು ಯುಎಸ್ ಅಧ್ಯಕ್ಷ ಜೋ ಬಿಡೆನ್ (Joe Biden) ಆಯೋಜಿಸುತ್ತಿದ್ದಾರೆ. ಇದಕ್ಕಾಗಿ ಭಾರತದ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ೪೦ ರಾಷ್ಟಗಳ ನಾಯಕರಿಗೆ ಆಹ್ವಾನ ನೀಡಲಾಗಿದೆ. 


COMMERCIAL BREAK
SCROLL TO CONTINUE READING

ರಷ್ಯಾ  ಚೀನಾ  ಅಧ್ಯಕ್ಷರಿಗೂ ಆಹ್ವಾನ : 
 ಜಾಗತಿಕ ತಾಪಮಾನ (Globl warming) ಏರಿಕೆ ಕುರಿತಂತೆ ಚರ್ಚೆಗೆ ಅಮೇರಿಕ ಸಂಪೂರ್ಣವಾಗಿ ಸಿದ್ಧವಾಗಿದೆ. ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಪಿಎಂ ಮೋದಿ (Narendra Modi) ಸೇರಿದಂತೆ 40 ಜಾಗತಿಕ ನಾಯಕರನ್ನು ಆಹ್ವಾನಿಸಲಾಗಿದೆ. ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಮತ್ತು ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಕೂಡ ಈ ಕಾರ್ಯಕ್ರಮದಲ್ಲಿ ಭಾಗಿತಾಗಲಿದ್ದಾರೆ  ಎನ್ನಲಾಗಿದೆ. ಏಪ್ರಿಲ್ 22 ಮತ್ತು 23 ರಂದು ಶೃಂಗಸಭೆ ನಡೆಯಲಿದೆ ಎಂದು ಅಮೆರಿಕ ಅಧ್ಯಕ್ಷರ ಕಚೇರಿ ಹೊರಡಿಸಿದ ಹೇಳಿಕೆಯಲ್ಲಿ ತಿಳಿಸಲಾಗಿದೆ.


ಇದನ್ನೂ ಓದಿ : ದಕ್ಷಿಣ ಈಜಿಪ್ಟ್‌ನಲ್ಲಿ ಎರಡು ರೈಲುಗಳು ಡಿಕ್ಕಿ, 32 ಜನರು ಸಾವು, 66 ಮಂದಿಗೆ ಗಾಯ


ಅನುಕೂಲವಾಗಲಿದೆ ಪ್ರಧಾನಿ ಮೋದಿ ಅನುಭವ : 
ಕ್ಲೈಮೇಟ್ ಆನ್ ಲೀಡರ್ಸ್ ಶೃಂಗಸಭೆಯಲ್ಲಿ (Summit) ಅಮೆರಿಕ ಕೆಲವು ದೊಡ್ಡ ನಿರ್ಧಾರಗಳನ್ನು ತೆಗೆದುಕೊಳ್ಳಬಹುದು ಎಂದು ಹೇಳಲಾಗಿದೆ.  ಹವಾಮಾನ ಬದಲಾವಣೆಯ ವಿರುದ್ಧ ಪರಿಣಾಮಕಾರಿ ಕಾರ್ಯತಂತ್ರವನ್ನು ರಚಿಸುವುದು ಸಹ  ಈ ಸಭೆಯ ಆದ್ಯತೆಗಳಲ್ಲಿ ಒಂದಾಗಿದೆ.  ಪರಿಸರ ಸಂರಕ್ಷಣೆಯಲ್ಲಿ ಭಾರತ (India) ಮಾಡಿರುವ ಉತ್ತಮ ಕೆಲಸಗಳ ಹಿನ್ನೆಲೆಯಲ್ಲಿ ಪಧಾನಿ ನರೇಂದ್ರ ಮೋದಿ ಅವರ ಅನುಭವವನ್ನು ಸದುಪಯೋಗಪಡಿಸಿಕೊಳ್ಳಲು ಮೋದಿಗೆ ಆಹ್ವಾನ ನೀಡಲಾಗಿದೆ. 


ಕೆಲವು ಸಮಯದ ಹಿಂದೆ, ಬ್ರಿಟಿಷ್ ಪ್ರಧಾನಿ ಬೋರಿಸ್ ಜಾನ್ಸನ್ (Boris Johnson) ಜಾಗತಿಕ ತಾಪಮಾನ ಏರಿಕೆಯ ವಿಷಯದಲ್ಲಿ ಪ್ರಧಾನಿ ನರೇಂದ್ರ ಮೋದಿ ಕೈಗೊಂಡಿರುವ  ಕ್ರಮಗಳ ಬಗ್ಗೆ ಶ್ಲಾಘನೆ ವ್ಯಕ್ತಪಡಿಸಿದ್ದರು.  


ಇದನ್ನೂ ಓದಿ : Coronavirus: ಕರೋನಾದಿಂದ ರಕ್ಷಿಸಬಹುದಾದ ಹ್ಯಾಂಡ್ ಸ್ಯಾನಿಟೈಜರ್‌ಗಳಿಂದ ಕ್ಯಾನ್ಸರ್ ಅಪಾಯ


ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe 
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.