Taliban-ಕಾಬೂಲ್ ವಿಮಾನ ನಿಲ್ದಾಣದಲ್ಲಿ ಭಯೋತ್ಪಾದಕ ದಾಳಿ ಬೆದರಿಕೆ ಬಗ್ಗೆ ಯುಎಸ್ ಎಚ್ಚರಿಸಿದೆ
US Warns Terror Attack threat at Kabul Airport: ಕಾಬೂಲ್ ವಿಮಾನ ನಿಲ್ದಾಣದ ಮೇಲೆ ಭಯೋತ್ಪಾದಕ ದಾಳಿಗೆ ಸಂಬಂಧಿಸಿದಂತೆ ಅಮೆರಿಕ ಎಚ್ಚರಿಕೆ ನೀಡಿದೆ ಮತ್ತು ತನ್ನ ನಾಗರಿಕರಿಗೆ ವಿಮಾನ ನಿಲ್ದಾಣದಿಂದ ದೂರವಿರುವಂತೆ ಸೂಚಿಸಿದೆ.
ವಾಷಿಂಗ್ಟನ್: ಅಫ್ಘಾನಿಸ್ತಾನದಲ್ಲಿ ತಾಲಿಬಾನ್ ಆಕ್ರಮಣದ ನಂತರ, ಪರಿಸ್ಥಿತಿ ಹದಗೆಡುತ್ತಿದ್ದು ಅಲ್ಲಿ ಸಿಲುಕಿರುವ ಜನರು ಶೀಘ್ರವೇ ದೇಶ ತೊರೆಯಲು ಹಾತೊರೆಯುತ್ತಿದ್ದಾರೆ. ಈ ಹಿನ್ನಲೆಯಲ್ಲಿ ಹೆಚ್ಚಿನ ಜನರು ಕಾಬೂಲ್ ವಿಮಾನ ನಿಲ್ದಾಣದಲ್ಲಿ ಜಮಾಯಿಸಿದ್ದಾರೆ. ಆದರೆ ಈ ಮಧ್ಯೆ ಯುಎಸ್ ದೊಡ್ಡ ಅಪಾಯದ ಬಗ್ಗೆ ಎಚ್ಚರಿಕೆಯನ್ನು ನೀಡಿದೆ ಮತ್ತು ಕಾಬೂಲ್ ವಿಮಾನ ನಿಲ್ದಾಣದಿಂದ ದೂರವಿರಲು ತನ್ನ ನಾಗರಿಕರಿಗೆ ಸಲಹೆ ನೀಡಿದೆ.
ಕಾಬೂಲ್ ವಿಮಾನ ನಿಲ್ದಾಣದ ಮೇಲೆ ಭಯೋತ್ಪಾದಕರ ದಾಳಿ:
ಕಾಬೂಲ್ ವಿಮಾನ ನಿಲ್ದಾಣದಲ್ಲಿ ಭಯೋತ್ಪಾದಕರ ದಾಳಿಯ ಬೆದರಿಕೆ (Terror Attack threat at Kabul Airport) ಹೆಚ್ಚಿರುವ ಕಾರಣ ತನ್ನ ನಾಗರಿಕರು ಸುರಕ್ಷಿತ ಸ್ಥಳಗಳಲ್ಲಿ ಉಳಿಯಬೇಕು ಮತ್ತು ಕಾಬೂಲ್ ವಿಮಾನ ನಿಲ್ದಾಣಕ್ಕೆ ಹೋಗಬಾರದು ಎಂದು ಅಮೆರಿಕ ಎಚ್ಚರಿಸಿದೆ. ಅಮೆರಿಕದ ಹೊರತಾಗಿ, ಬ್ರಿಟನ್ ಮತ್ತು ಆಸ್ಟ್ರೇಲಿಯಾ ಕೂಡ ತಮ್ಮ ನಾಗರಿಕರಿಗೆ ಎಚ್ಚರಿಕೆ ನೀಡಿವೆ.
ಇದನ್ನೂ ಓದಿ- Operation Devi Shakti: IAF ವಿಮಾನದಲ್ಲಿ ಕಾಬೂಲ್‌ನಿಂದ ದೆಹಲಿಗೆ ಪ್ರಯಾಣಿಸಿದ 24 ಭಾರತೀಯರು ಮತ್ತು 11 ನೇಪಾಳ್ ನಾಗರೀಕರು
ನಾಗರಿಕರು ವಿಮಾನ ನಿಲ್ದಾಣಕ್ಕೆ ಹೋಗುವುದನ್ನು ತಪ್ಪಿಸುವಂತೆ ಅಮೆರಿಕ ಸಲಹೆ:
ಅಫ್ಘಾನಿಸ್ತಾನದಲ್ಲಿ ಸಿಲುಕಿರುವ ತನ್ನ ಪ್ರಜೆಗಳಿಗೆ ಕಾಬೂಲ್ ವಿಮಾನ ನಿಲ್ದಾಣದಿಂದ ತಕ್ಷಣವೇ ದೂರ ಸರಿಯುವಂತೆ ಅಮೆರಿಕ ಎಚ್ಚರಿಕೆಯನ್ನು ನೀಡಿದೆ. ಬುಧವಾರ ತಡರಾತ್ರಿ ಕಾಬೂಲ್‌ನಲ್ಲಿರುವ ಅಮೆರಿಕ ರಾಯಭಾರ ಕಚೇರಿಯಿಂದ ಹೊರಡಿಸಲಾದ ಭದ್ರತಾ ಎಚ್ಚರಿಕೆಯ ಪ್ರಕಾರ, ಕಾಬೂಲ್‌ನಲ್ಲಿರುವ ಅಮೆರಿಕ ರಾಯಭಾರ ಕಚೇರಿಯು ಈ ಸಮಯದಲ್ಲಿ ಹಮೀದ್ ಕರ್ಜೈ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಪ್ರಯಾಣಿಸದಂತೆ ಅಮೆರಿಕ ನಾಗರಿಕರಿಗೆ ಸೂಚಿಸಿದೆ. ಕಾಬೂಲ್‌ನ ವಿಮಾನ ನಿಲ್ದಾಣದ (Kabul Airport) ಹೊರಗಿನ ಗೇಟ್‌ನಲ್ಲಿ ಯುಎಸ್ ನಾಗರಿಕರು ಬೆದರಿಕೆಗಳ ಕಾರಣದಿಂದ "ತಕ್ಷಣವೇ" ಹೊರಹೋಗುವಂತೆ ವಿದೇಶಾಂಗ ಇಲಾಖೆಯು ಎಚ್ಚರಿಕೆಯನ್ನು ನೀಡಿದೆ. ಇದಲ್ಲದೆ ಕಾಬೂಲ್‌ನಲ್ಲಿರುವ ಯುಎಸ್ ರಾಯಭಾರ ಕಚೇರಿಯಿಂದ ಹೊರಡಿಸಲಾದ ಭದ್ರತಾ ಎಚ್ಚರಿಕೆಯಲ್ಲಿ, ಎಬಿ ಗೇಟ್, ಈಸ್ಟ್ ಗೇಟ್ ಅಥವಾ ಉತ್ತರ ಗೇಟ್‌ನಲ್ಲಿರುವ ಯುಎಸ್ ನಾಗರಿಕರು ತಕ್ಷಣವೇ ಆ ಸ್ಥಳಗಳನ್ನೂ ತೊರೆಯುವಂತೆ ಸಲಹೆ ನೀಡಲಾಗಿದೆ.
ಕಾಬೂಲ್ ವಿಮಾನ ನಿಲ್ದಾಣದ ಹೊರಗೆ ವಿದೇಶಿ ಪ್ರಜೆಗಳ ಮೇಲೆ ಭಯೋತ್ಪಾದಕರ ದಾಳಿ ಹೆಚ್ಚಾಗಿದೆ ಎಂದು ಕಾಬೂಲ್‌ನಲ್ಲಿರುವ ಯುಎಸ್ ರಾಯಭಾರ ಕಚೇರಿ ಹೇಳಿದೆ. ಕಾಬೂಲ್ ವಿಮಾನ ನಿಲ್ದಾಣದ ಹೊರಗಿನ ಭದ್ರತಾ ಅಪಾಯಗಳಿಂದಾಗಿ, ನಾವು ಯುಎಸ್ ನಾಗರಿಕರಿಗೆ ವಿಮಾನ ನಿಲ್ದಾಣಕ್ಕೆ ಪ್ರಯಾಣಿಸುವುದನ್ನು ತಪ್ಪಿಸಲು ಮತ್ತು ಯುಎಸ್ ಸರ್ಕಾರದ ಪ್ರತಿನಿಧಿಯಿಂದ ವೈಯಕ್ತಿಕ ಸೂಚನೆಯನ್ನು ಸ್ವೀಕರಿಸದಿದ್ದರೆ ಈ ಸಮಯದಲ್ಲಿ ವಿಮಾನ ನಿಲ್ದಾಣದ ಗೇಟ್‌ಗಳ ಬಳಿ ಜಮಾಯಿಸುವುದನ್ನು ತಪ್ಪಿಸಲು ನಾವು ಸಲಹೆ ನೀಡುತ್ತಿದ್ದೇವೆ ಎಂದು ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.
ಇದನ್ನೂ ಓದಿ- Afghanistan Crisis: ಭಯೋತ್ಪಾದನೆಯ ರೀತಿಯಲ್ಲಿ ಆಫ್ಘಾನ್ ಪರಿಸ್ಥಿತಿ ಎದುರಿಸಲು ಸಿದ್ಧ ಎಂದ ಬಿಪಿನ್ ರಾವತ್
ಕಾಬೂಲ್‌ನಿಂದ ಇಲ್ಲಿಯವರೆಗೆ ಸಾವಿರಾರು ಜನರನ್ನು ಸ್ಥಳಾಂತರಿಸಲಾಗಿದೆ
ಅಫ್ಘಾನಿಸ್ತಾನದಲ್ಲಿ ತಾಲಿಬಾನ್ ಆಕ್ರಮಣದ ನಂತರ, ಅಮೆರಿಕ, ಬ್ರಿಟನ್, ಆಸ್ಟ್ರೇಲಿಯಾ ಮತ್ತು ಭಾರತ ಸೇರಿದಂತೆ ಅನೇಕ ದೇಶಗಳು ತಮ್ಮ ನಾಗರಿಕರನ್ನು ಕಾಬೂಲ್‌ನಿಂದ ಸ್ಥಳಾಂತರಿಸುವಲ್ಲಿ ನಿರತವಾಗಿವೆ. ಆಗಸ್ಟ್ 14 ರಿಂದ ಕಾಬೂಲ್ ವಿಮಾನ ನಿಲ್ದಾಣದಿಂದ ಜನರ ರಕ್ಷಣಾ ಕಾರ್ಯ ನಡೆಯುತ್ತಿದೆ ಮತ್ತು ಇಲ್ಲಿಯವರೆಗೆ ಸಾವಿರಾರು ಜನರನ್ನು ಸ್ಥಳಾಂತರಿಸಲಾಗಿದೆ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ