ಲಂಡನ್: ವಿಜಯ್ ಮಲ್ಯಗೆ ಜಾಮೀನು, ಸೆ.12ಕ್ಕೆ ವಿಚಾರಣೆ ಮುಂದೂಡಿಕೆ
ವಿಜಯ್ ಮಲ್ಯಗೆ ಜಾಮೀನು ನೀಡಿ ಆದೇಶ ಹೊರಡಿಸಿದ್ದು, ವಿಚಾರಣೆಯನ್ನು ಸೆಪ್ಟೆಂಬರ್ 12ಕ್ಕೆ ನ್ಯಾಯಾಲಯ ಮುಂದೂಡಿದೆ.
ಲಂಡನ್: ಮದ್ಯ ದೊರೆ ವಿಜಯ್ ಮಲ್ಯ ಹಸ್ತಾಂತರ ಪ್ರಕರಣದ ಅಂತಿಮ ವಿಚಾರಣೆ ನಡೆಸಿದ ವೆಸ್ಟ್ ಮಿನಿಸ್ಟರ್ ನ್ಯಾಯಾಲಯ, ವಿಜಯ್ ಮಲ್ಯಗೆ ಜಾಮೀನು ನೀಡಿ ಆದೇಶ ಹೊರಡಿಸಿದ್ದು, ವಿಚಾರಣೆಯನ್ನು ಸೆಪ್ಟೆಂಬರ್ 12ಕ್ಕೆ ಮುಂದೂಡಿದೆ.
ಬಹುಸಾವಿರ ಕೋಟಿ ರೂ. ಸಾಲವಂಚನೆ ಪ್ರಕರಣದಲ್ಲಿ ವಿದೇಶಕ್ಕೆ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ ವಿರುದ್ಧ ದಾಖಲಾಗಿರುವ ಗಡಿಪಾರು ಅರ್ಜಿ ವಿಚಾರಣೆಗೆ ಸಂಬಂಧಿಸಿ ಮಂಗಳವಾರ ಲಂಡನ್‌ನ ವೆಸ್ಟ್‌ಮಿನಿಸ್ಟರ್ ನ್ಯಾಯಾಲಯಕ್ಕೆ ಪುತ್ರ ಸಿದ್ಧಾರ್ಥ್ ಜೊತೆ ಹಾಜರಾಗಿದ್ದರು.
62 ವರ್ಷದ ಮದ್ಯ ದೊರೆ ಕಳೆದ ವರ್ಷ ಏಪ್ರಿಲ್ ತಿಂಗಳಿನಲ್ಲಿ ಬಂಧನಕ್ಕೊಳಗಾದ ನಂತರ ಹಸ್ತಾಂತರ ಪ್ರಕರಣದಲ್ಲಿ ವಾರೆಂಟ್ ನಲ್ಲಿ ಜಾಮೀನು ಪಡೆದುಕೊಂಡಿದ್ದು, ವಿದೇಶದಲ್ಲಿದ್ದುಕೊಂಡೆ ಕಾನೂನು ಹೋರಾಟ ನಡೆಸುತ್ತಿದ್ದಾರೆ.