ವಿಶ್ವದ ಅತ್ಯಂತ ಸಂತೋಷದ ದೇಶ ಯಾವುದು? ಅಮೆರಿಕ, ಚೀನಾ ಅಥವಾ ರಷ್ಯಾ ಅಲ್ಲ. ಭಾರತವೂ ಈ ಪಟ್ಟಿಯಲ್ಲಿಲ್ಲ.
ವಿಶ್ವದ ಅತ್ಯಂತ ಸಂತೋಷದಾಯಕ ದೇಶಗಳ ಬಗ್ಗೆ ಇಂದು ನಾವು ನಿಮಗೆ ಮಾಹಿತಿ ನೀಡಲಿದ್ದೇವೆ.
ಸಂತೋಷವಾಗಿರುವುದು ಪ್ರತಿಯೊಬ್ಬರಿಗೂ ಇಷ್ಟ. ಆದರೆ ಒತ್ತಡಕ್ಕೆ ಒಳಗಾಗುವುದು ಮನುಷ್ಯ ಸಹಜ ಗುಣ. ಹೀಗಾಗಿ ಸಂತೋಷದಿಂದ ಇರುವುದು ಪ್ರತಿಯೊಬ್ಬರಿಗೂ ಸಾಧ್ಯವಿಲ್ಲ.
ಅನೇಕ ಸಂಸ್ಥೆಗಳು ವಿಶ್ವದ ಟಾಪ್ ಸಂತೋಷದ ದೇಶಗಳ ಪಟ್ಟಿಯನ್ನು ಬಿಡುಗಡೆ ಮಾಡುತ್ತವೆ. ಈ ಪಟ್ಟಿಯಲ್ಲಿ ಭಾರತಕ್ಕೆ ಎಷ್ಟನೇ ಸ್ಥಾನವಿದೆ ಅನ್ನೋದರ ಬಗ್ಗೆ ತಿಳಿಯಿರಿ.
ವರ್ಲ್ಡ್ ಆಫ್ ಸ್ಟ್ಯಾಟಿಸ್ಟಿಕ್ಸ್ ಇತ್ತೀಚಿನ ವಿಶ್ವದ ಅತ್ಯಂತ ಸಂತೋಷದ ದೇಶಗಳ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಇದರಲ್ಲಿ ಭಾರತವು 126ನೇ ಸ್ಥಾನದಲ್ಲಿದೆ.
ಈ ಪಟ್ಟಿಯ ಪ್ರಕಾರ, ಫಿನ್ಲ್ಯಾಂಡ್ ವಿಶ್ವದ ಅತ್ಯಂತ ಸಂತೋಷದಾಯಕ ದೇಶಗಳ ಪಟ್ಟಿಯಲ್ಲಿ ಅಗ್ರಸ್ಥಾನವನ್ನು ಪಡೆದುಕೊಂಡಿದೆ.
ವಿಶ್ವದ ಅತ್ಯಂತ ಸಂತೋಷದ ದೇಶಗಳ ಪಟ್ಟಿಯ ಪೈಕಿ ಡೆನ್ಮಾರ್ಕ್ ಎರಡನೇ ಸ್ಥಾನವನ್ನು ಗಿಟ್ಟಿಸಿಕೊಂಡಿದೆ.
ಈ ಪಟ್ಟಿಯ ಪ್ರಕಾರ, ಐಸ್‌ಲ್ಯಾಂಡ್ ಮೂರನೇ ಸ್ಥಾನವನ್ನು ಪಡೆದುಕೊಂಡಿದೆ.
ಸಂತೋಷದ ದೇಶಗಳ ಪಟ್ಟಿಯಲ್ಲಿ ಸ್ವೀಡನ್ ನಾಲ್ಕನೇ ಸ್ಥಾನದಲ್ಲಿದ್ದರೆ, ಇಸ್ರೇಲ್ ಐದನೇ ಸ್ಥಾನದಲ್ಲಿದೆ.