ನವದೆಹಲಿ: ಕೊರೊನಾ ವೈರಸ್ ಪ್ರಕೋಪವನ್ನು ಹತ್ತಿಕ್ಕಲು ಭಾರದದ ಮೋದಿ ನೇತೃತ್ವದ ಸರ್ಕಾರ ಕೈಗೊಂಡ ಕ್ರಮಗಳನ್ನು ಅತ್ಯುತ್ತಮ ಕ್ರಮಗಳೆಂದು ಬಣ್ಣಿಸಿರುವ ವಿಶ್ವ ಆರೋಗ್ಯ ಸಂಸ್ಥೆ ಅಂದರೆ WHO, ಪ್ರಧಾನಿ ಮೋದಿ ಅವರು ಕೈಗೊಂಡ ನಿರ್ಣಯಗಳನ್ನು ಕೊಂಡಾಡಿದೆ. ಈ ಕುರಿತು ಹೇಳಿಕೆ ನೀಡಿರುವ ವಿಶ್ವ ಆರೋಗ್ಯ ಸಂಸ್ಥೆಯ ಮುಖ್ಯಸ್ಥ TA ಗೆಬ್ರೆಯೇಸನ್, ಬಡವರಿಗಾಗಿ ಭಾರತದ ಪ್ರಧಾನಿ ನರೇಂದ್ರ ಮೋದಿ ಘೋಷಿಸಿರುವ ಆರ್ಥಿಕ ಪ್ಯಾಕೇಜ್, ಸಂಕಷ್ಟದ ಪರಿಸ್ಥಿತಿಯಲ್ಲಿ ಉತ್ತಮ ಕೆಲಸ ಮಾಡಲಿದೆ. ಅಷ್ಟೇ ಅಲ್ಲ ಇತರೆ ಅಭಿವೃದ್ಧಿ ಹೊಂದಿರುವ ದೇಶಗಳು ಭಾರತವನ್ನು ಉದಾಹರಣೆಯಾಗಿ ಇಟ್ಟುಕೊಳ್ಳಬೇಕು ಎಂದು ಹೇಳಿದ್ದಾರೆ.


COMMERCIAL BREAK
SCROLL TO CONTINUE READING

ಪ್ರಧಾನಿ ನರೇಂದ್ರ ಮೋದಿ ಜಾರಿಗೊಳಿಸಿರುವ 24 ಅರಬ್ ಡಾಲರ್ ಆರ್ಥಿಕ ಪ್ಯಾಕೇಜ್ ಅನ್ನು ಸ್ವಾಗತಿಸಿರುವ ವಿಶ್ವ ಆರೋಗ್ಯ ಸಂಸ್ಥೆ, ಭಾರತದ 80 ಕೋಟಿ ನಾಗರಿಕರಿಗೆ ಉಚಿತ ರೇಶನ್ ನೀಡುವ ಕ್ರಮ ಸ್ವಾಗತಾರ್ಹವಾಗಿದ್ದು, ಮುಂದಿನ ಮೂರು ತಿಂಗಳಿಗಾಗಿ ಬಡವರಿಗಾಗಿ ಭಾರತ ಸರ್ಕಾರ ಕೈಗೊಂಡ ಕ್ರಮಗಳು ಅತ್ಯುತ್ತಮ ಕ್ರಮಗಳಾಗಿವೆ ಎಂದು ಅವರು ಹೇಳಿದ್ದಾರೆ.


ವಿಶ್ವದ ಹಲವು ದೇಶಗಳು ಸಮಾಜ ಕಲ್ಯಾಣಕ್ಕಾಗಿ ಹಲವು ಕ್ರಮಗಳನ್ನು ಕೈಗೊಂಡಿವೆ ಹಾಗೂ ತಮ್ಮ ದೇಶದ ನಾಗರಿಕರಿಗೆ ಆಹಾರ-ನೀರು ಮತ್ತು ಇತರೆ ಅತ್ಯವಶ್ಯಕ ವಸ್ತುಗಳ ತೊಂದರೆಯಾಗದಂತೆ ನೋಡಿಕೊಂಡಿದ್ದು, ಇಂತಹ ಸಂಕಷ್ಟದ ಪರಿಸ್ಥಿತಿಯಲ್ಲಿ ಒಂದು ಉತ್ತಮ ಬೆಳವಣಿಗೆಯಾಗಿದೆ ಎಂದು WHO ಹೇಳಿದೆ.


ಇದಕ್ಕೆ ಸಂಬಂಧಿಸಿದಂತೆ ಮಾತನಾಡಿರುವ WHO ಮುಖ್ಯಸ್ಥ, ಭಾರತವನ್ನು ಉದಾಹರಣೆಯಾಗಿ ಇಟ್ಟುಕೊಂಡು ಪ್ರಧಾನಿ ನರೇಂದ್ರ ಮೋದಿ ಅವರು ಘೋಷಿಸಿರುವ 24 ಅರಬ್ ಡಾಲರ್ ಪ್ಯಾಕೇಜ್ ಅನ್ನು ಸಮರ್ಥಿಸಿದ್ದಾರೆ. ಇದರಲ್ಲಿ ಬಡವರಿಗೆ ಉಚಿತ ರೇಶನ್, ಬಡ ಮಹಿಳೆಯರ ಖಾತೆಗೆ ನೇರ ಹಣ ವರ್ಗಾವಣೆಗಳಂತಹ ಕ್ರಮಗಳು ಸ್ವಾಗತಾರ್ಹವಾಗಿವೆ ಎಂದು ಹೇಳಿದ್ದಾರೆ. ಇದಲ್ಲದೆ ಮುಂದಿನ ಮೂರು ತಿಂಗಳ ಅವಧಿಗೆ ದೇಶದ ಒಟ್ಟು 8 ಲಕ್ಷ ಕುಟುಂಬಗಳಿಗೆ ಉಚಿತ ಅಡುಗೆ ಅನಿಲ ಒದಗಿಸುವ ಕ್ರಮ ಕೂಡ ನಾಗರಿಕರಿಗೆ ನೇರ ಲಾಭ ಒದಗಿಸಲಿದೆ. ಸಂಕಷ್ಟದ ಪರಿಸ್ಥಿತಿಯಲ್ಲಿ ಸರ್ಕಾರದ ಈ ನೆರವು ಅತ್ಯಾವಶ್ಯಕವಾಗಿದೆ ಎಂದು ಅವರು ಹೇಳಿದ್ದಾರೆ.


ಈ ಮೊದಲೂ ಕೂಡ ಅವರು ಭಾರತದ ಮೇಲೆ ಭರವಸೆ ವ್ಯಕ್ತಪಡಿಸಿದ್ದರು
ಈ ಮೊದಲು ಕೂಡ ಮಾರ್ಚ್ 23-24ರಂದು ಭಾರತದ ಮೇಲೆ ಭರವಸೆ ವ್ಯಕ್ತಪಡಿಸಿದ್ದ WHO, ಭಾರತ ಕೊರೊನಾ ವೈರಸ್ ವಿರುದ್ಧದ ಹೋರಾಟದ ನೇತೃತ್ವ ವಹಿಸಬೇಕು ಎಂದು ಹೇಳಿತ್ತು. ಇದಕ್ಕೆ ಸಂಬಂಧಿಸಿದಂತೆ ಹೇಳಿಕೆ ನೀಡಿದ್ದ ಸಂಘಟನೆ, ಕೊವಿಡ್-19 ವಿರುದ್ಧ ಹೋರಾಟದ ಭವಿಷ್ಯ ಭಾರತದಂತಹ ಹೆಚ್ಚು ಜನಸಂಖ್ಯೆಯುಳ್ಳ ರಾಷ್ಟ್ರಗಳು ಇದರ ವಿರುದ್ಧ ಯಾವರೀತಿಯ ಕ್ರಮ ಕೈಗೊಳ್ಳಲಿವೆ ಎಂಬುದರ ಮೇಲೆ ಆಧರಿಸಲಿದೆ ಎಂದು ಹೇಳಿತ್ತು.