ಭಾರತೀಯ ವಿದ್ಯಾರ್ಥಿಗಳು ವೈದ್ಯಕೀಯ ವಿದ್ಯಾಭ್ಯಾಸಕ್ಕಾಗಿ ಉಕ್ರೇನ್ ಅನ್ನೇ ಏಕೆ ಆಯ್ಕೆ ಮಾಡುತ್ತಾರೆ?

ಸುಮಾರು 80,000 ಅಂತರಾಷ್ಟ್ರೀಯ ವಿದ್ಯಾರ್ಥಿಗಳು ಉಕ್ರೇನ್‌ನಲ್ಲಿ ಅಧ್ಯಯನ ಮಾಡುತ್ತಾರೆ ಮತ್ತು ಒಟ್ಟು ವಿದೇಶಿ ವಿದ್ಯಾರ್ಥಿಗಳ ಕಾಲು ಭಾಗದಷ್ಟು ಭಾರತೀಯರು ಇದ್ದಾರೆ.

Written by - Zee Kannada News Desk | Last Updated : Mar 1, 2022, 03:42 PM IST
  • ಸುಮಾರು 80,000 ಅಂತರಾಷ್ಟ್ರೀಯ ವಿದ್ಯಾರ್ಥಿಗಳು ಉಕ್ರೇನ್‌ನಲ್ಲಿ ಅಧ್ಯಯನ ಮಾಡುತ್ತಾರೆ
  • ಒಟ್ಟು ವಿದೇಶಿ ವಿದ್ಯಾರ್ಥಿಗಳ ಕಾಲು ಭಾಗದಷ್ಟು ಭಾರತೀಯರು ಇದ್ದಾರೆ
  • ಭಾರತೀಯ ವಿದ್ಯಾರ್ಥಿಗಳು ವೈದ್ಯಕೀಯ ವಿದ್ಯಾಭ್ಯಾಸಕ್ಕಾಗಿ ಉಕ್ರೇನ್ ಅನ್ನೇ ಏಕೆ ಆಯ್ಕೆ ಮಾಡುತ್ತಾರೆ?
ಭಾರತೀಯ ವಿದ್ಯಾರ್ಥಿಗಳು ವೈದ್ಯಕೀಯ ವಿದ್ಯಾಭ್ಯಾಸಕ್ಕಾಗಿ ಉಕ್ರೇನ್ ಅನ್ನೇ ಏಕೆ ಆಯ್ಕೆ ಮಾಡುತ್ತಾರೆ?   title=
ಉಕ್ರೇನ್

ನವದೆಹಲಿ: ರಷ್ಯಾ ಮತ್ತು ಉಕ್ರೇನ್ (Russia Ukraine War) ಪಡೆಗಳ ನಡುವಿನ ಹೋರಾಟ ಮಂಗಳವಾರ (ಮಾರ್ಚ್ 1) ಆರನೇ ದಿನಕ್ಕೆ ಕಾಲಿಟ್ಟಿದ್ದು, ಹೆಚ್ಚಿನ ಸಂಖ್ಯೆಯ ವಿದ್ಯಾರ್ಥಿಗಳು ಸೇರಿದಂತೆ ಸುಮಾರು 14,000 ಭಾರತೀಯರು ಇನ್ನೂ ಯುದ್ಧ ಪೀಡಿತ ದೇಶದಲ್ಲಿ ಸಿಲುಕಿಕೊಂಡಿದ್ದಾರೆ ಎಂದು ಹೇಳಲಾಗಿದೆ.

ಇದನ್ನೂ ಓದಿ: Russia Ukraine war : ಉಕ್ರೇನ್ ನಲ್ಲಿ ಕರ್ನಾಟಕದ ವಿದ್ಯಾರ್ಥಿ ಸಾವು

ಕೆಲವರು ಕಡಿಮೆ ಪರಿಣಾಮ ಬೀರುವ ಪಶ್ಚಿಮ ಪ್ರದೇಶಗಳಿಗೆ ತೆರಳಲು ಸಾಧ್ಯವಾಗಿಲ್ಲ. ಕೆಲವರು ಗಡಿಯನ್ನು ತಲುಪಿದ್ದರು, ಗಡಿದಾಟಿ ಹೋಗಲು ಅವರಿಗೆ ಅನುಮತಿಸಿಲ್ಲ. ಆಹಾರ ಮತ್ತು ನೀರಿನ ಕೊರತೆಯನ್ನು ಅಲ್ಲಿನ ಜನ ಎದುರಿಸುತ್ತಿದ್ದಾರೆ ಎಂದು ವರದಿಯಾಗಿದೆ.

ಕಳೆದ ವಾರ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಆದೇಶದಂತೆ ರಷ್ಯಾ ಸೇನೆ (Russia Army) ಉಕ್ರೇನ್ ಮೇಲೆ ದಾಳಿ ಮಾಡಿದ ನಂತರ, ಕಳೆದ ಕೆಲವು ದಿನಗಳಲ್ಲಿ ಯುದ್ಧ ಪೀಡಿತ ಪ್ರದೇಶದಿಂದ ಸಾವಿರಾರು ಭಾರತೀಯ ಪ್ರಜೆಗಳನ್ನು ದೇಶಕ್ಕೆ ಕರೆತರಲಾಗುತ್ತಿದೆ.

ಉಕ್ರೇನ್‌ನ ಶಿಕ್ಷಣ ಮತ್ತು ವಿಜ್ಞಾನ ಸಚಿವಾಲಯದ ಮಾಹಿತಿಯ ಪ್ರಕಾರ, ಸುಮಾರು 80,000 ಅಂತರಾಷ್ಟ್ರೀಯ ವಿದ್ಯಾರ್ಥಿಗಳು ಉಕ್ರೇನ್‌ನಲ್ಲಿ (Ukraine) ಅಧ್ಯಯನ ಮಾಡುತ್ತಾರೆ ಮತ್ತು ಒಟ್ಟು ವಿದೇಶಿ ವಿದ್ಯಾರ್ಥಿಗಳ ಕಾಲು ಭಾಗದಷ್ಟು ಭಾರತೀಯರು ಇದ್ದಾರೆ. ಹೀಗಾಗಿ ಭಾರತೀಯ ವಿದ್ಯಾರ್ಥಿಗಳು ವೈದ್ಯಕೀಯ ಅಧ್ಯಯನಕ್ಕಾಗಿ ಉಕ್ರೇನ್ ಅನ್ನು ಏಕೆ ಆಯ್ಕೆ ಮಾಡುತ್ತಾರೆ ಎಂಬ ಪ್ರಶ್ನೆ ಎಲ್ಲರನ್ನೂ ಕಾಡುತ್ತಲೇ ಇರುತ್ತದೆ. ಇದಕ್ಕೆ ಮುಖ್ಯ ಕಾರಣ ಗುಣಮಟ್ಟದ ಶಿಕ್ಷಣ. 

ಉಕ್ರೇನ್‌ನಲ್ಲಿ ಹೆಚ್ಚಿನ ಭಾರತೀಯ ವಿದ್ಯಾರ್ಥಿಗಳು ವೈದ್ಯಕೀಯ ಅಧ್ಯಯನವನ್ನು ನಡೆಸುತ್ತಿದ್ದಾರೆ ಮತ್ತು ಇದಕ್ಕೆ ಒಂದು ಕಾರಣವೆಂದರೆ ದೇಶವು ಉತ್ತಮ ಗುಣಮಟ್ಟದ ಶಿಕ್ಷಣವನ್ನು ನೀಡಲು ಹೆಸರುವಾಸಿಯಾಗಿದೆ. ವೈದ್ಯಕೀಯದಲ್ಲಿ ಹೆಚ್ಚಿನ ಸಂಖ್ಯೆಯ ಪದವಿ ಮತ್ತು ಸ್ನಾತಕೋತ್ತರ ವಿಶೇಷತೆಗಳನ್ನು ಹೊಂದಿರುವ ಉಕ್ರೇನ್ ತನ್ನ ಖಂಡದಲ್ಲಿ ನಾಲ್ಕನೇ ಸ್ಥಾನದಲ್ಲಿದೆ ಎಂದು ವರದಿಯಾಗಿದೆ.

ಇದಲ್ಲದೆ ಉಕ್ರೇನ್‌ನಲ್ಲಿರುವ ಖಾಸಗಿ ವೈದ್ಯಕೀಯ ಕಾಲೇಜುಗಳ (Medical Collges) ಬೋಧನಾ ಶುಲ್ಕ ಭಾರತದ ಕಾಲೇಜುಗಳಿಗೆ ಹೋಲಿಸಿದರೆ ಅಗ್ಗವಾಗಿದೆ. ಉಕ್ರೇನಿಯನ್ ಕಾಲೇಜುಗಳು ವಿಶ್ವ ಆರೋಗ್ಯ ಮಂಡಳಿಯಿಂದ ಗುರುತಿಸಲ್ಪಟ್ಟಿವೆ ಮತ್ತು ಭಾರತೀಯ ವೈದ್ಯಕೀಯ ಮಂಡಳಿಯು ಸಹ ಅವುಗಳನ್ನು ಗುರುತಿಸಿದಂತೆ ಪದವಿಗಳು ಭಾರತದಲ್ಲಿ ಮಾನ್ಯವಾಗಿರುತ್ತವೆ. ಉಕ್ರೇನಿಯನ್ ವೈದ್ಯಕೀಯ ಪದವಿಗಳನ್ನು ಪಾಕಿಸ್ತಾನದ ವೈದ್ಯಕೀಯ ಮತ್ತು ಡೆಂಟಲ್ ಕೌನ್ಸಿಲ್, ಯುರೋಪಿಯನ್ ಕೌನ್ಸಿಲ್ ಆಫ್ ಮೆಡಿಸಿನ್ ಮತ್ತು ಯುನೈಟೆಡ್ ಕಿಂಗ್‌ಡಂನ ಜನರಲ್ ಮೆಡಿಕಲ್ ಕೌನ್ಸಿಲ್, ಇತರರಿಂದಲೂ ಗುರುತಿಸಲ್ಪಟ್ಟಿದೆ.

ಇದನ್ನೂ ಓದಿ: Ukraine Russia War : ಉಕ್ರೇನ್‌ಗೆ ಮುಂದಿನ 24 ಗಂಟೆ ತುಂಬಾ ಕಷ್ಟಕರ ಎಂದ ಅಧ್ಯಕ್ಷ ಝೆಲೆನ್ಸ್ಕಿ

ಭಾರತೀಯ ವಿದ್ಯಾರ್ಥಿಗಳು ಉಕ್ರೇನ್ ಅನ್ನು ಆಯ್ಕೆ ಮಾಡುತ್ತಾರೆ. ಏಕೆಂದರೆ ಹಲವಾರು ಪ್ರಸಿದ್ಧ ವೈದ್ಯಕೀಯ ಶಾಲೆಗಳು ಸೀಟು ಒದಗಿಸಲು ಪ್ರವೇಶ ಪರೀಕ್ಷೆಯನ್ನು ತೆಗೆದುಕೊಳ್ಳುವುದಿಲ್ಲ. ಇತ್ತೀಚೆಗೆ, ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ (Prahlad Joshi) ಅವರು ವಿದೇಶದಲ್ಲಿ ವೈದ್ಯಕೀಯ ವ್ಯಾಸಂಗ ಮಾಡುವ ಸುಮಾರು 90% ಭಾರತೀಯರು ಭಾರತದಲ್ಲಿ ಅರ್ಹತಾ ಪರೀಕ್ಷೆಗಳಲ್ಲಿ ಉತ್ತೀರ್ಣರಾಗುವುದಿಲ್ಲ ಎಂದು ಹೇಳಿದ್ದಾರೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News