ಟೋಕಿಯೊ: ಜಪಾನ್‌ನ ಮಾಜಿ ಪ್ರಧಾನಿ ಶಿಂಜೊ ಅಬೆ ಶುಕ್ರವಾರದಂದು ಭಾಷಣ ಮಾಡುತಿದ್ದ ಸಂದರ್ಭದಲ್ಲಿ ಅವರನ್ನು ಗುಂಡಿಕ್ಕಿ ಹತ್ಯೆಗೈಯ್ಯಲಾಗಿದೆ.
ಈಗ ಸುದ್ದಿ ಸಂಸ್ಥೆಯ ಮೂಲಗಳ ಪ್ರಕಾರ, ಪಶ್ಚಿಮ ಜಪಾನಿನ ನಗರವಾದ ನಾರಾದ 40 ವರ್ಷದ ಟೆಟ್ಸುಯಾ ಯಮಗಾಮಿ ಅವರು ಶಿಂಜೊ ಅಬೆ ಅವರ ಬಗ್ಗೆ ಅಸಮಾಧಾನಗೊಂಡಿದ್ದರು, ಅದಕ್ಕಾಗಿಯೇ ಅವರನ್ನು ಕೊಲ್ಲಲು ಸಂಚು ರೂಪಿಸಿದ್ದಾಗಿ ತನಿಖಾಧಿಕಾರಿಗಳ ಮುಂದೆ ಹೇಳಿದ್ದಾರೆ.
ಇದನ್ನೂ ಓದಿ: ಜಪಾನ್ ಮಾಜಿ ಪ್ರಧಾನಿ ಶಿಂಜೊ ಅಬೆ ಅವರ ಜೀವನದ ಪ್ರಮುಖ ಘಟನಾವಳಿಗಳು
ಜಪಾನ್‌ನಲ್ಲಿ ಸ್ಥಳೀಯ ಕಾಲಮಾನ ಬೆಳಗ್ಗೆ 11:30ಕ್ಕೆ ನಾರಾ ನಗರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಶಿಂಜೋ ಮಾತನಾಡುತ್ತಿದ್ದರು.ಈ ವೇಳೆ ದಾಳಿಕೋರ ಗುಂಡು ಹಾರಿಸಿದ್ದರಿಂದಾಗಿ ಜಪಾನ್‌ನ ಸುದೀರ್ಘ ಅವಧಿಯ ಪ್ರಧಾನಿಯಾಗಿದ್ದ ಶಿಂಜೊ ಅಬೆ ಅವರು ತಕ್ಷಣ ಕುಸಿದು ಬಿದ್ದಿದ್ದಾರೆ.ಇದಾದ ನಂತರ ರಕ್ತಸಿಕ್ತ ಸ್ಥಿತಿಯಲ್ಲಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ ಕೂಡ ಅವರು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಇದೆ ವೇಳೆ ಹಂತಕನನ್ನು ಪೊಲೀಸರು ಬಂಧಿಸಿದ್ದಾರೆ.
Sharing a picture from my most recent meeting with my dear friend, Shinzo Abe in Tokyo. Always passionate about strengthening India-Japan ties, he had just taken over as the Chairman of the Japan-India Association. pic.twitter.com/Mw2nR1bIGz
— Narendra Modi (@narendramodi) July 8, 2022
ನೆಚ್ಚಿನ ಗೆಳೆಯ ಶಿಂಜೊ ಅಬೆ ಅವರ ನಿಧನಕ್ಕೆ ತೀವ್ರ ಸಂತಾಪ ವ್ಯಕ್ತಪಡಿಸಿದ ಪ್ರಧಾನಿ ಮೋದಿ ಶನಿವಾರದಂದು ದೇಶಾದ್ಯಂತ ಶೋಕಾಚರಣೆಯನ್ನು ಘೋಷಿಸಿದ್ದಾರೆ.
ಇದನ್ನೂ ಓದಿ: Watch: ಜಪಾನ್‌ನ ಮಾಜಿ ಪ್ರಧಾನಿ ಶಿಂಜೊ ಅಬೆ ಮೇಲೆ ಗುಂಡಿನ ದಾಳಿ, ವಿಡಿಯೋ ವೈರಲ್
'ನನ್ನ ಆತ್ಮೀಯ ಸ್ನೇಹಿತನ ಸಾವಿನಿಂದ ನಾನು ದುಃಖಿತನಾಗಿದ್ದೇನೆ.ಅವರು ಅತ್ಯುತ್ತಮ ನಾಯಕರಷ್ಟೇ ಅಲ್ಲದೆ ಅಸಾಮಾನ್ಯ ಆಡಳಿತರಾಗಿದ್ದರು, ಈಗ ಅವರು ತಮ್ಮ ದೇಶಕ್ಕಾಗಿ ತಮ್ಮ ಪ್ರಾಣವನ್ನೇ ತ್ಯಾಗ ಮಾಡಿದ್ದಾರೆ' ಎಂದು ಪ್ರಧಾನಿ ಮೋದಿ ಸಂತಾಪ ವ್ಯಕ್ತಪಡಿಸಿದ್ದಾರೆ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.