ನವಜಾತ ಶಿಶು ಮಕ್ಕಳಲ್ಲಿ ಬಿಸಿಲಿನಿಂದಾಗುವ ನಿರ್ಜಲೀಕರಣ ತಡೆಯಲು ಹೀಗೆ ಮಾಡಿ...!

ವಿಪರೀತ ಬಿಸಿಲು ದಾಖಲಾಗುತ್ತಿರುವ ಹಿನ್ನಲೆಯಲ್ಲಿ ಬಿಸಿಲಿನ ತಾಪಮಾನದಿಂದ ಮಕ್ಕಳಲ್ಲಿ ಉಂಟಾಗುವ ನಿರ್ಜಲೀಕರಣ ತಡೆಯಲು ತಾಯಂದಿರು ನವಜಾತ ಶಿಶು ಮಕ್ಕಳಿಗೆ ಹೆಚ್ಚು-ಹೆಚ್ಚು ಎದೆ ಹಾಲುಣಿಸಬೇಕು ಎಂದು ಆರೋಗ್ಯ ಮತ್ತು ಕುಟುಂಬ ಇಲಾಖೆ ತಿಳಿಸಿದೆ.

Written by - Manjunath N | Last Updated : Apr 2, 2024, 06:50 PM IST
  • ಮಗುವಿಗೆ ಬಿಸಿಲಿನ ತಾಪಮಾನದಿಂದ ರಕ್ಷಿಸಲು ತೆಳುವಾದ ಹತ್ತಿಬಟ್ಟೆಯನ್ನು ಮಾತ್ರ ಹಾಕಬೇಕು
  • 2 ರಿಂದ 3 ಬಟ್ಟೆಗಳನ್ನು ಅಥವಾ ಹೊದಿಕೆಯನ್ನು ಮಕ್ಕಳ ಮೇಲೆ ಹಾಕಬಾರದು
  • ಅಪಾಯಕಾರಿ ಚಿಹ್ನೆಗಳನ್ನು ಗುರುತಿಸಿ ತಕ್ಷಣ ಆಸ್ಪತ್ರೆಗೆ ಕರೆದುಕೊಂಡು ಬರಬೇಕು
ನವಜಾತ ಶಿಶು ಮಕ್ಕಳಲ್ಲಿ ಬಿಸಿಲಿನಿಂದಾಗುವ ನಿರ್ಜಲೀಕರಣ ತಡೆಯಲು ಹೀಗೆ ಮಾಡಿ...! title=
ಸಾಂಧರ್ಭಿಕ ಚಿತ್ರ

ಬೆಂಗಳೂರು: ವಿಪರೀತ ಬಿಸಿಲು ದಾಖಲಾಗುತ್ತಿರುವ ಹಿನ್ನಲೆಯಲ್ಲಿ ಬಿಸಿಲಿನ ತಾಪಮಾನದಿಂದ ಮಕ್ಕಳಲ್ಲಿ ಉಂಟಾಗುವ ನಿರ್ಜಲೀಕರಣ ತಡೆಯಲು ತಾಯಂದಿರು ನವಜಾತ ಶಿಶು ಮಕ್ಕಳಿಗೆ ಹೆಚ್ಚು-ಹೆಚ್ಚು ಎದೆ ಹಾಲುಣಿಸಬೇಕು ಎಂದು ಆರೋಗ್ಯ ಮತ್ತು ಕುಟುಂಬ ಇಲಾಖೆ ತಿಳಿಸಿದೆ.

ಸಾಮಾನ್ಯವಾಗಿ ಮಾರ್ಚ್ ಮತ್ತು ಏಪ್ರೀಲ್ ತಿಂಗಳುಗಳಲ್ಲಿ ಬಳ್ಳಾರಿ ಸೇರಿದಂತೆ ರಾಜ್ಯದ ಬಹಳಷ್ಟು ಜಿಲ್ಲೆಗಳಲ್ಲಿ ಸಹ 40 ಡಿಗ್ರಿ ಮೇಲ್ಪಟ್ಟು ಬಿಸಿಲು ಕಂಡುಬರುತ್ತಿದ್ದು, ಸಾರ್ವಜನಿಕರು ಮಧ್ಯಾಹ್ನ 01 ಗಂಟೆಯಿಂದ ಸಂಜೆ 04 ಗಂಟೆಯವರೆಗೆ ಮನೆಯಲ್ಲಿಯೇ ಇರಬೇಕು. ಒಂದು ವೇಳೆ ಮನೆಯಿಂದ ಹೊರಗೆ ಬರುವ ಅಗತ್ಯವಿದ್ದರೆ ಮಾತ್ರ ಛತ್ರಿ ಹಾಗೂ ನೀರಿನ ಬಾಟೆಲ್‍ನೊಂದಿಗೆ ಬರುವಂತೆ ಸಾರ್ವಜನಿಕರಲ್ಲಿ ಇಲಾಖೆ ವಿನಂತಿಸಿದೆ.

ಇದನ್ನೂ ಓದಿ: ಅಮಿತ್ ಶಾ ಗೂಂಡಾ, ರೌಡಿ ಎಂದು ಉಲ್ಲೇಖಿಸಿದ್ದ ಮಾಜಿ ಶಾಸಕ ಯತೀಂದ್ರಗೆ ಸಂಕಷ್ಟ

ಸಾಮಾನ್ಯವಾಗಿ ಬೇಸಿಗೆ ಕಾಲದಲ್ಲಿ ಹೆರಿಗೆಯಾಗುವ ಅದರಲ್ಲೂ ಮೊದಲ ಮಗುವಿಗೆ ಜನನ ನೀಡುವ ತಾಯಿಗೆ ತನ್ನ ನವಜಾತ ಶಿಶುವಿಗೆ ಹೆರಿಗೆ ನಂತರದಲ್ಲಿ ನಿಯಮಿತವಾಗಿ ಹಾಲುಣಿಸುವ ಅಭ್ಯಾಸವು ಗೊತ್ತಿಲ್ಲದೆ ಕೆಲವು ನವಜಾತ ಶಿಶುವುಗಳಲ್ಲಿ ನಿರ್ಜಲೀಕರಣ ಕಂಡುಬರುವ ಸಾಧ್ಯತೆಗಳಿವೆ. ಶಸ್ತ್ರಚಿಕಿತ್ಸೆ ಮೂಲಕ ಹೆರಿಗೆಯಾದಲ್ಲಿ ಇಂತಹ ಸಾಧ್ಯತೆಗಳು ಹೆಚ್ಚು. ಅಂತಹ ಸಂದರ್ಭದಲ್ಲಿ ಕುಟುಂಬದ ಸದಸ್ಯರು ಚೊಚ್ಚಲು ಹೆರಿಗೆಯಾದ ಬಾಣಂತಿಯರಿಗೆ ಹೆರಿಗೆ ನಂತರದಲ್ಲಿ ಪ್ರತಿ ಒಂದರಿಂದ 2 ಗಂಟೆಯೊಳಗಡೆ ಶಿಶುವಿಗೆ ತಪ್ಪದೇ ಎದೆ ಹಾಲುಣಿಸಬೇಕು ಮತ್ತು ಎದೆ ಹಾಲಿನಲ್ಲಿ ಶೇ.70 ರಷ್ಟು ನೀರಿನ ಅಂಶವಿರುವುದರಿಂದ ಮಗುವಿಗೆ ಉಂಟಾಗಬಹುದಾದ ನಿರ್ಜಲೀಕರಣವನ್ನು ತಡೆಗಟ್ಟುತ್ತದೆ. 6 ತಿಂಗಳವರೆಗೆ ಮಗುವಿಗೆ ತಾಯಿಯ ಎದೆಹಾಲನ್ನು ಮಾತ್ರ ಕೊಡಬೇಕು ಎಂದು ತಿಳಿಸಿದೆ.

ಮಗುವಿಗೆ ಬಿಸಿಲಿನ ತಾಪಮಾನದಿಂದ ರಕ್ಷಿಸಲು ತೆಳುವಾದ ಹತ್ತಿಬಟ್ಟೆಯನ್ನು ಮಾತ್ರ ಹಾಕಬೇಕು. 2 ರಿಂದ 3 ಬಟ್ಟೆಗಳನ್ನು ಅಥವಾ ಹೊದಿಕೆಯನ್ನು ಮಕ್ಕಳ ಮೇಲೆ ಹಾಕಬಾರದು. ಮುಂಜಾಗೃತ ಕ್ರಮವಾಗಿ ಮಕ್ಕಳು ಮತ್ತು ವಯಸ್ಕರರಿಗೆ ಕಂಡುಬರಬಹುದಾದ ಅಪಾಯಕಾರಿ ಚಿಹ್ನೆಗಳನ್ನು ಗುರುತಿಸಿ ತಕ್ಷಣ ಆಸ್ಪತ್ರೆಗೆ ಕರೆದುಕೊಂಡು ಬರಬೇಕು ಎಂದು ತಿಳಿಸಿದೆ.

ಇದನ್ನೂ: ಡಾ.ಕೆ.ಸುಧಾಕರ್‌..ರಕ್ಷಾ ರಾಮಯ್ಯ.. ಯಾರಿಗೆ ಚಿಕ್ಕಬಳ್ಳಾಪುರ ಕ್ಷೇತ್ರ..?

ಸಾಮಾನ್ಯ ಅಪಾಯದ ಸಂಕೇತಗಳು:

ಮಕ್ಕಳು ಆಹಾರ ಸೇವಿಸಲು ನಿರಾಕರಿಸುವುದು, ಕನಿಷ್ಠ ಮೂತ್ರ ವಿಸರ್ಜನೆ, ಬಾಯಿ ಒಣಗುವಿಕೆ, ಆಲಸ್ಯ, ಮೂರ್ಛೆ ಹೋಗುವುದು, ದೇಹದ ಯಾವುದೇ ಭಾಗದಲ್ಲಿ ರಕ್ತಸ್ರಾವ ವಯಸ್ಕರಲ್ಲಿ ಅರೆಪ್ರಜ್ಞಾವಸ್ಥೆ, ಪ್ರಜ್ಞೆ ತಪ್ಪುವುದು, ಸಿಡಿಮಿಡಿಗೊಳ್ಳುವುದು, ಗಾಬರಿಗೊಳ್ಳುವುದು, ಅತಿಯಾದ ತಲೆನೋವು, ಚರ್ಮವು ಬಿಸಿ ಹಾಗೂ ಕೆಂಪಾದ ಒಣಚರ್ಮ, ಆತಂಕ, ತಲೆಸುತ್ತುವಿಕೆ, ಮಾಂಸಖಂಡಗಳಲ್ಲಿ ಸುಸ್ತು ಅಥವಾ ಸೆಳೆತ, ವಾಕರಿಕೆ ಮತ್ತು ವಾಂತಿ ಕಂಡುಬರಬಹುದು.

ಶಾಖಾಘಾತಕ್ಕೆ ಚಿಕಿತ್ಸೆ:

ನೆರಳಿರುವೆಡೆಗೆ ಸ್ಥಳಾಂತರಿಸಬೇಕು. ವ್ಯಕ್ತಿಯ ವಸ್ತ್ರಗಳನ್ನು ಸಡಿಲಗೊಳಿಸಿ, ಅಂಗಾತ ಮಲಗಿಸಿ, ಕಾಲುಗಳನ್ನು ಎತ್ತರಿಸಬೇಕು. ಸಾಮಾನ್ಯ ನೀರಿನಿಂದ ದೇಹವನ್ನು ಒರೆಸಬೇಕು. ಹತ್ತಿರದ ವೈದ್ಯರನ್ನು ಕರೆಸಬೇಕು.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=I87DcFM35WY

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

 

 

Trending News