IPL 2024: ಬೆಂಗಳೂರಿನಲ್ಲಿ ಇಂದು RCB ಪಂದ್ಯ, ಈ 4 ಪ್ರಮುಖ ರಸ್ತೆಗಳ ಸಂಚಾರ ಮಾರ್ಗ ಬದಲಾವಣೆ !

IPL match bangalore: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್ 2024) ಪಂದ್ಯ ಹಿನ್ನೆಲೆ ಬೆಂಗಳೂರಿನ ಕೆಲವು ಮಾರ್ಗಗಳನ್ನು ಬದಲಿಸಲಾಗಿದೆ. ಪಂದ್ಯಕ್ಕೂ ಮುನ್ನ ಬೆಂಗಳೂರು ಸಂಚಾರ ಪೊಲೀಸರು ಮಾರ್ಗಸೂಚಿ ಪ್ರಕಟಿಸಿದ್ದಾರೆ.    

Written by - Chetana Devarmani | Last Updated : May 12, 2024, 01:50 PM IST
  • ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣ
  • ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ಪಂದ್ಯ
  • ಬೆಂಗಳೂರು ಸಂಚಾರ ಪೊಲೀಸರ ಮಾರ್ಗಸೂಚಿ ಪ್ರಕಟ
IPL 2024: ಬೆಂಗಳೂರಿನಲ್ಲಿ ಇಂದು RCB ಪಂದ್ಯ, ಈ 4 ಪ್ರಮುಖ ರಸ್ತೆಗಳ ಸಂಚಾರ ಮಾರ್ಗ ಬದಲಾವಣೆ ! title=

ಬೆಂಗಳೂರು: ಕಬ್ಬನ್ ಪಾರ್ಕ್ ಬಳಿಯ ಎಂಜಿ ರಸ್ತೆಯಲ್ಲಿರುವ ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಇಂದು ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ಪಂದ್ಯ ನಡೆಯಲಿದೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ಮತ್ತು ಡೆಲ್ಲಿ ಕ್ಯಾಪಿಟಲ್ಸ್ (ಡಿಸಿ) ನಡುವಿನ ಪಂದ್ಯ ಇಂದು ಸಂಜೆ ನಡೆಯಲಿದೆ. ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್ 2024) ಪಂದ್ಯ ಹಿನ್ನೆಲೆ ಬೆಂಗಳೂರಿನ ಕೆಲವು ಮಾರ್ಗಗಳನ್ನು ಬದಲಿಸಲಾಗಿದೆ. ಪಂದ್ಯಕ್ಕೂ ಮುನ್ನ ಬೆಂಗಳೂರು ಸಂಚಾರ ಪೊಲೀಸರು ಮಾರ್ಗಸೂಚಿ ಪ್ರಕಟಿಸಿದ್ದಾರೆ.  

ಮೇ 12 ರಂದು ಸಂಜೆ 7.30ಕ್ಕೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆರ್‌ಸಿಬಿ ಮತ್ತು ಡೆಲ್ಲಿ ಪಂದ್ಯ ಆರಂಭಗೊಳ್ಳಲಿದೆ. ಹೀಗಾಗಿ ಮಧ್ಯಾಹ್ನ 3 ಗಂಟೆಯಿಂದ ರಾತ್ರಿ 11 ಗಂಟೆ ವರೆಗೆ ನಿರ್ಬಂಧ ಮತ್ತು ಸಂಚಾರ ದಟ್ಟಣೆ ಇರಲಿದೆ ಎಂದು ಬೆಂಗಳೂರು ಟ್ರಾಫಿಕ್ ಪೊಲೀಸರು ಹೇಳಿದ್ದಾರೆ. ‌ 

ಇದನ್ನೂ ಓದಿ: ಐಪಿಎಲ್ ಇತಿಹಾಸದಲ್ಲಿ ಅತಿ ಹೆಚ್ಚು ಶತಕ ಸಿಡಿಸಿದ ಟಾಪ್ 5 ಆಟಗಾರರು ಇವರೇ! 

ಈ ಸ್ಥಳಗಳಲ್ಲಿ ಪಾರ್ಕಿಂಗ್ ನಿಷೇಧಿಸಲಾಗಿದೆ:

ಕ್ವೀನ್ಸ್ ರಸ್ತೆ, ಎಂಜಿ ರಸ್ತೆ, ಎಂಜಿ ರಸ್ತೆಯಿಂದ ಕಬ್ಬನ್ ರಸ್ತೆ, ರಾಜಭವನ ರಸ್ತೆ
ಸೆಂಟ್ರಲ್ ಸ್ಟ್ರೀಟ್ ರಸ್ತೆ, ಕಬ್ಬನ್ ರಸ್ತೆ, ಸೇಂಟ್ ಮಾರ್ಕ್ಸ್ ರಸ್ತೆ, ಮ್ಯೂಸಿಯಂ ರಸ್ತೆ
ಕಸ್ತೂರಿಬಾ ರಸ್ತೆ, ಅಂಬೇಡ್ಕರ್ ರಸ್ತೆ, ಟ್ರಿನಿಟಿ ಸರ್ಕಲ್, ಲ್ಯಾವೆಲ್ಲೆ ರಸ್ತೆ
ವಿಟ್ಟಲ್ ಮಲ್ಯ ರೋಡ್, ಕಿಂಗ್ಸ್ ರಸ್ತೆ ಮತ್ತು ನೃಪತುಂಗ ರಸ್ತೆ

ಪ್ರಯಾಣಿಕರು ಎಲ್ಲಿ ಪಾರ್ಕ್ ಮಾಡಬಹುದು?

ಸೆಂಟ್ ಜೊಸೆಫ್ ಇಂಡಿಯನ್ ಸ್ಕೂಲ್ ಗ್ರೌಂಡ್‌
ಯುಬಿ ಸಿಟಿ ಪಾರ್ಕಿಂಗ್ ಸ್ಥಳ
ಬಿಎಂಟಿಸಿ ಬಸ್ ನಿಲ್ದಾಣದ ಮೊದಲನೇ ಮಹಡಿ ಹಾಗೂ ಕೆಜಿಐಡಿ ಬಿಲ್ಡಿಂಗ್
ಕಿಂಗ್ಸ್ ರಸ್ತೆ (ಕಬ್ಬನ್ ಪಾರ್ಕ್ ಒಳಭಾಗ)

ಚಿನ್ನಸ್ವಾಮಿ ಕ್ರೀಡಾಂಗಣದ ಸುತ್ತುಮುತ್ತಲಿನ ರಸ್ತೆಗಳಲ್ಲಿ ಟ್ರಾಫಿಕ್ ಜಾಮ್‌ ಉಂಟಾಗುವ ಹಿನ್ನೆಲೆ ಈ ರಸ್ತೆಗಳಲ್ಲಿ ಸಂಚಾರದಿಂದ ದೂರ ಉಳಿಯಲು ಪೊಲೀಸರು ಮನವಿ ಮಾಡಿದ್ದಾರೆ. 

ಇದನ್ನೂ ಓದಿ: ಕೆಕೆಆರ್ ತಂಡದ ಕೋಚ್ ಜೊತೆ ರೋಹಿತ್ ಶರ್ಮಾ ರಹಸ್ಯ ಸಭೆ! ಮುಂಬೈ ಬಿಟ್ಟು ಕೋಲ್ಕತ್ತಾ ಪಾಲಾಗ್ತಾರಾ ಹಿಟ್ ಮ್ಯಾನ್?

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

Trending News