ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದು ಮಳೆ ಸಾಧ್ಯತೆ: 6 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್

Bengaluru Rains: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಇಂದು ಬೆಳ್ಳಂಬೆಳಗ್ಗೆ ವರುಣನ ಸಿಂಚನವಾಗಿದೆ. ಎಂಜಿ ರೋಡ್, ಟ್ರಿನಿಟಿ ಸರ್ಕಲ್, ಹಲಸೂರು ಸೇರಿದಂತೆ ಬೆಂಗಳೂರಿನ ವಿವಿದೆಡೆ ಇಂದು ಬೆಳಿಗ್ಗೆಯಿಂದಲೇ ಆರಂಭವಾಗಿದ್ದ ಮಳೆಯಿಂದಾಗಿ  ಕಚೇರಿ, ಸೇರಿ ಇನ್ನಿತರ ಕೆಲಸಕ್ಕೆ ತೆರಳುವವರು ಪರದಾಡುವಂತಾಗಿತ್ತು. 

Written by - Yashaswini V | Last Updated : May 17, 2024, 09:32 AM IST
  • ದಕ್ಷಿಣ ಕನ್ನಡ, ಮೈಸೂರು, ಮಂಡ್ಯ ಸೇರಿ 6 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌
  • ಉಳಿದೆಡೆ ಸಣ್ಣ ಅಥವಾ ಭಾರೀ ಮಳೆಯ ಮುನ್ಸೂಚನೆ
  • ಹವಾಮಾನ ಇಲಾಖೆಯಿಂದ ಗುಡುಗು ಮಿಂಚು ಬಿರುಗಾಳಿ ಸಹಿತ ಮಳೆ ಬಗ್ಗೆಎಚ್ಚರಿಕೆ
ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದು ಮಳೆ ಸಾಧ್ಯತೆ: 6 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್  title=

Karnataka Rain Update: ಕರ್ನಾಟಕದಲ್ಲಿ ಮುಂಗಾರು (Monsoon)  ಆಗಮನಕ್ಕೂ ಮುನ್ನವೇ ಹಲವೆಡೆ ಉತ್ತಮ ಮಳೆಯಾಗುತ್ತಿದ್ದು, ರೈತರ ಮುಖದಲ್ಲಿ ಮಂದಹಾಸ ಮೂಡಿದೆ.  ರಾಜ್ಯದ ವಿವಿಧ ಭಾಗಗಳಲ್ಲಿ ಇಂದೂ ಕೂಡ ಮಳೆ ಮುಂದುವರೆಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ (Meteorological Department) ಎಚ್ಚರಿಕೆ ನೀಡಿದೆ. 

ರಾಜ್ಯಾದ್ಯಂತ ಒಂದು ವಾರ ಭರ್ಜರಿ ಮಳೆ: 
ಕರ್ನಾಟಕದಾದ್ಯಂತ ಇನ್ನೂ ಒಂದು ವಾರಗಳ ಕಾಲ ಭರ್ಜರಿ ಮಳೆ (Rain) ಯಾಗುವ ಬಗ್ಗೆ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಮೇ 18 ಬೆಳಗ್ಗೆ 8.30ವರೆಗೆ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಈ ಮೂರು ಕರಾವಳಿ ಜಿಲ್ಲೆಗಳ ಬಹುತೇಕ ಪ್ರದೇಶಗಳಲ್ಲಿ (ಶೇಕಡ 75 ಭೂಭಾಗ) ಮಳೆ ನಿರೀಕ್ಷಿಸಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. 

ಕರಾವಳಿ, ದಕ್ಷಿಣ ಒಳನಾಡು, ಉತ್ತರ ಒಳನಾಡಿನ ಕೆಲವು ಪ್ರದೇಶಗಳಲ್ಲಿ ಗುಡುಗು, ಮಿಂಚಿನ ಸಹಿತ ಭಾರೀ ಮಳೆ ನಿರೀಕ್ಷಿಸಲಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. 

ಇದನ್ನೂ ಓದಿ- ರಾಜ್ಯದಲ್ಲಿ ಪೂರ್ವ ಮುಂಗಾರು ಮಳೆ :ಮುಂದಿನ ನಾಲ್ಕು ದಿನಗಳ ವರೆಗೆ ಜೋರಾಗಿರಲಿದೆ ವರುಣಾರ್ಭಟ

6 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್: 
ರಾಜ್ಯದ ದಕ್ಷಿಣ ಒಳನಾಡಿನ ಪ್ರದೇಶಗಳಾದ ಬಳ್ಳಾರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ,  ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ಚಾಮರಾಜನಗರ,  ರಾಮನಗರ, ಶಿವಮೊಗ್ಗ, ತುಮಕೂರು ಹಲವೆಡೆ ಮಳೆ ಸೂಚನೆ ನೀಡಿರುವ ಐಎಂಡಿ, ದಕ್ಷಿಣ ಕನ್ನಡ, ಮೈಸೂರು, ಮಂಡ್ಯ ಸೇರಿ 6 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌  (Yellow alert)ಘೋಷಿಸಲಾಗಿದೆ. 

ಹವಾಮಾನ ಇಲಾಖೆ ನೀಡಿರುವ ಮಾಹಿತಿಯ ಪ್ರಕಾರ, ಕರ್ನಾಟಕದ ಉತ್ತರ ಒಳನಾಡಿನ ಜಿಲ್ಲೆಗಳಾದ ಬಾಗಲಕೋಟೆ, ಬೆಳಗಾವಿ, ಬೀದರ್‌, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ ಜಿಲ್ಲೆಗಳಲ್ಲಿ ಸಾಧಾರಣ ಮಳೆ ನಿರೀಕ್ಷಿಸಲಾಗಿದೆ.

ಇದನ್ನೂ ಓದಿ- ರಾಜಧಾನಿ ಬೆಂಗಳೂರಿನಲ್ಲಿ ಮುಂದಿನ ಐದು ದಿನ ಬಿರುಗಾಳಿ ಸಹಿತ ಮಳೆ:ಈ ಜಿಲ್ಲೆಗಳಲ್ಲಿಯೂ ಅಬ್ಬರಿಸಲಿದ್ದಾನೆ ವರುಣ

ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ವರುಣನ ಸಿಂಚನ (Bengaluru Rain Update): 
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಇಂದು ಬೆಳ್ಳಂಬೆಳಗ್ಗೆ ವರುಣನ ಸಿಂಚನವಾಗಿದೆ. ಎಂಜಿ ರೋಡ್, ಟ್ರಿನಿಟಿ ಸರ್ಕಲ್, ಹಲಸೂರು ಸೇರಿದಂತೆ ಬೆಂಗಳೂರಿನ ವಿವಿದೆಡೆ ಇಂದು ಬೆಳಿಗ್ಗೆಯಿಂದಲೇ ಆರಂಭವಾಗಿದ್ದ ಮಳೆಯಿಂದಾಗಿ ಕಚೇರಿ, ಸೇರಿ ಇನ್ನಿತರ ಕೆಲಸಕ್ಕೆ ತೆರಳುವವರು ಪರದಾಡುವಂತಾಗಿತ್ತು. ಇನ್ನೂ ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು ಮಧ್ಯಾಹ್ನದ ಬಳಿಕ ಸಾಧಾರಣ ಮಳೆ ಸಾಧ್ಯತೆ ಇದೆ ಎನ್ನಲಾಗಿದೆ. 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News