Karnataka Weather Alert: ಮೇ 6ರಿಂದ ಕರ್ನಾಟಕದ ಈ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ

Karnataka Weather Alert: ಬೆಳಗಾವಿ, ಗದಗ, ಹಾವೇರಿ, ಕೊಪ್ಪಳ, ಬಳ್ಳಾರಿ, ವಿಜಯನಗರ, ಬೀದರ್, ಕಲಬುರಗಿ, ವಿಜಯಪುರ, ಯಾದಗಿರಿ, ರಾಯಚೂರು ಮತ್ತು ಬಾಗಲಕೋಟೆ ಜಿಲ್ಲೆಗಳಲ್ಲಿ ಮೇ 2ರವರೆಗೆ ಬಿಸಿಗಾಳಿ ಹೆಚ್ಚಾಗುವ ಸಾಧ್ಯತೆ ಇದ್ದು, ಎಚ್ಚರಿಕೆಯಿಂದ ಇರುವಂತೆ ಹವಾಮಾನ ಇಲಾಖೆ ತಿಳಿಸಿದೆ. 

Written by - Puttaraj K Alur | Last Updated : May 1, 2024, 08:45 PM IST
  • ಕರ್ನಾಟಕ ಸೇರಿದಂತೆ ದೇಶದ ಹಲವು ರಾಜ್ಯಗಳಲ್ಲಿ ಮೇ 6ರಿಂದ ಸಾಮಾನ್ಯ ಮಳೆ
  • ರಾಜ್ಯದಲ್ಲಿ ಉಷ್ಣಾಂಶ ಹೆಚ್ಚಾಗುತ್ತಿದ್ದು, ಹೀಟ್‌ವೇವ್ ಬಗ್ಗೆ ಎಚ್ಚರಿಕೆ ನೀಡಿದ ಹವಾಮಾನ ಇಲಾಖೆ
  • ಬೆಂಗಳೂರಿನಲ್ಲಿ ದಾಖಲೆಯ 38 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದೆ
Karnataka Weather Alert: ಮೇ 6ರಿಂದ ಕರ್ನಾಟಕದ ಈ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ title=
Karnataka Weather Alert

Karnataka Weather Alert: ಬಿಸಿಲ ಬೇಗೆಯಿಂದ ಕಂಗೆಟ್ಟಿರುವ ರಾಜ್ಯದ ಜನರಿಗೆ ಭಾರತೀಯ ಹವಾಮಾನ ಇಲಾಖೆ ಗುಡ್‌ ನ್ಯೂಸ್‌ ನೀಡಿದೆ. ಕರ್ನಾಟಕ ಸೇರಿದಂತೆ ದೇಶದ ಹಲವು ರಾಜ್ಯಗಳಲ್ಲಿ ಮೇ 6ರಿಂದ ಸಾಮಾನ್ಯ ಮಳೆಯಾಗಲಿದೆ ಎಂದು ತಿಳಿಸಿದೆ.

ಮೇ ತಿಂಗಳಿನಲ್ಲಿ ಕರ್ನಾಟಕ ಸೇರಿದಂತೆ ವಿವಿಧ ರಾಜ್ಯಗಳಲ್ಲೂ ಮಳೆಯಾಗಲಿದೆ. ಮೇ 6ರ ನಂತರ ಹಾಸನ, ರಾಮನಗರ, ಮಂಡ್ಯ, ಚಾಮರಾಜನಗರ, ಕೊಡಗು, ಮೈಸೂರು, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರದಲ್ಲಿ ಮಳೆಯಾಗಲಿದೆ. ಉತ್ತರ ಕರ್ನಾಟಕ ಭಾಗದ ಹಲವು ಜಿಲ್ಲೆಗಳಲ್ಲಿಯೂ ಮಳೆಯಾಗಲಿದೆ ಎಂದು ಹೇಳಲಾಗಿದೆ. ದಕ್ಷಿಣ ಭಾರತ ಮತ್ತು ಉತ್ತರ ಭಾರತದ ಕೆಲವು ರಾಜ್ಯಗಳಲ್ಲಿ ಉಷ್ಣ ಮಾರುತ ಹೆಚ್ಚಲಿದ್ದು, ಉತ್ತರ ಭಾರತದಲ್ಲಿ 5 ರಿಂದ 8 ದಿನಗಳ ಕಾಲ ಸಾಮಾನ್ಯ ಮಳೆಯಾಗಲಿದೆ. 

ಇದನ್ನೂ ಓದಿ: Prajwal Revanna Case: ಪ್ರಜ್ವಲ್ ರೇವಣ್ಣ ಅವರನ್ನು ಭಾರತಕ್ಕೆ ವಾಪಸ್ ಕರೆತರಲು ಪ್ರಧಾನಿ ಮೋದಿಗೆ ಸಿಎಂ ಪತ್ರ 

ಕರ್ನಾಟಕದಲ್ಲಿ 3-4 ದಿನಗಳ ಕಾಲ ಮತ್ತಷ್ಟು ಬಿಸಿಲು ದಾಖಲಾಗಲಿದೆ. ಈಗಾಗಲೇ ರಾಜ್ಯದಲ್ಲಿ ಬಿಸಿಲಿನ ಝಳದಿಂದ ಜನರು ತತ್ತರಿಸಿ ಹೋಗಿದ್ದಾರೆ. ದಿನದಿಂದ ದಿನಕ್ಕೆ ಉಷ್ಣಾಂಶ ಹೆಚ್ಚಾಗುತ್ತಲೇ ಇದ್ದು, ಹವಾಮಾನ ಇಲಾಖೆಯು ಹೀಟ್‌ ವೇವ್ ಬಗ್ಗೆ ಎಚ್ಚರಿಕ ನೀಡಿದೆ. 

ಈಗಾಗಲೇ ಬೆಂಗಳೂರು ಸೇರಿದಂತೆ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ದಾಖಲೆ ಪ್ರಮಾಣದ ಬಿಸಿಲು ದಾಖಲಾಗಿದೆ. ಸದ್ಯ ಬೆಂಗಳೂರಿನಲ್ಲಿ ದಾಖಲೆಯ 38 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದೆ. ಮುಂಗಾರಿನ ಕೊರತೆಯಿಂದ ತಾಪಮಾನ ಹೆಚ್ಚಾಗಿದ್ದು, ಅನೇಕ ಜಿಲ್ಲೆಗಳಲ್ಲಿ ಬರ ಪರಿಸ್ಥಿತಿ ತಲೆದೋರಿದೆ. ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಕುಡಿಯುವ ನೀರಿಗೂ ಹಾಹಾಕಾರ ಶುರುವಾಗಿದೆ. 

ಇದನ್ನೂ ಓದಿ: ಕಾಂಗ್ರೆಸ್‌ನವರು ಕುಮಾರಸ್ವಾಮಿಯನ್ನು ಸಿಎಂ ಮಾಡಿದ್ದರು

ಬೆಳಗಾವಿ, ಗದಗ, ಹಾವೇರಿ, ಕೊಪ್ಪಳ, ಬಳ್ಳಾರಿ, ವಿಜಯನಗರ, ಬೀದರ್, ಕಲಬುರಗಿ, ವಿಜಯಪುರ, ಯಾದಗಿರಿ, ರಾಯಚೂರು ಮತ್ತು ಬಾಗಲಕೋಟೆ ಜಿಲ್ಲೆಗಳಲ್ಲಿ ಮೇ 2ರವರೆಗೆ ಬಿಸಿಗಾಳಿ ಹೆಚ್ಚಾಗುವ ಸಾಧ್ಯತೆ ಇದ್ದು, ಎಚ್ಚರಿಕೆಯಿಂದ ಇರುವಂತೆ ಹವಾಮಾನ ಇಲಾಖೆ ತಿಳಿಸಿದೆ. 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.

Trending News