Karnataka Weather: ರಾಜ್ಯದ ಈ ಜಿಲ್ಲೆಗಳಲ್ಲಿ ಭಾರೀ ಮಳೆ, 6 ಜಿಲ್ಲೆಗಳಲ್ಲಿ ʼಯೆಲ್ಲೋ ಅಲರ್ಟ್‌ʼ!

Karnataka Weather Alert: ಮುಂದಿನ 3 ಗಂಟೆಗಳಲ್ಲಿ ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಬೆಳಗಾವಿ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಹಾಸನ, ಕೋಲಾರ, ಮಂಡ್ಯ, ರಾಮನಗರ, ತುಮಕೂರು ಸೇರಿದಂತೆ ಒಂದು ಅಥವಾ ಎರಡು ಕಡೆ ಗುಡುಗು ಸಹಿತ ಸಿಡಿಲು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ರಾಜ್ಯ ಹವಾಮಾನ ಇಲಾಖೆ ತಿಳಿಸಿದೆ.  

Written by - Puttaraj K Alur | Last Updated : May 17, 2024, 04:46 PM IST
  • ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದಿನಿಂದ ಭಾರೀ ಮಳೆ ಸಾಧ್ಯತೆ
  • ರಾಜ್ಯದ 6 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ
  • ಸಿಲಿಕಾನ್‌ ಸಿಟಿ ಬೆಂಗಳೂರಿನಲ್ಲಿಯೂ ಗುಡುಗು ಸಹಿತ ಮಳೆ
Karnataka Weather: ರಾಜ್ಯದ ಈ ಜಿಲ್ಲೆಗಳಲ್ಲಿ ಭಾರೀ ಮಳೆ, 6 ಜಿಲ್ಲೆಗಳಲ್ಲಿ ʼಯೆಲ್ಲೋ ಅಲರ್ಟ್‌ʼ! title=
ಇಂದಿನಿಂದ ಭಾರೀ ಮಳೆ?

ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದಿನಿಂದ(ಮೇ ೧೭) ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ರಾಜ್ಯ ಹವಾಮಾನ ಇಲಾಖೆ ತಿಳಿಸಿದೆ. ಮಳೆಯ ಸಾಧ್ಯತೆ ಹಿನ್ನೆಲೆ 6 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಹವಾಮಾನ ಇಲಾಖೆಯ ಮಾಹಿತಿ ಪ್ರಕಾರ, ಸಿಲಿಕಾನ್‌ ಸಿಟಿ ಬೆಂಗಳೂರು ಸೇರಿದಂತೆ ರಾಜ್ಯದಾದ್ಯಂತ ಇಂದು ಭಾರೀ ಮಳೆಯಾಗುವ ಸಾಧ್ಯತೆ ಇದೆ. ಮುಂದಿನ 24 ಗಂಟೆಯಲ್ಲಿ ಕರಾವಳಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಮುನ್ಸೂಚನೆ ನೀಡಿದೆ.

ಇದನ್ನೂ ಓದಿ: ಚಿಕ್ಕಮಗಳೂರಿನಲ್ಲಿ ಆಲಿಕಲ್ಲು ಸಹಿತ ಭಾರಿ ಮಳೆ

ಮಳೆ ಮುನ್ಸೂಚನೆ: ಮುಂದಿನ 3 ಗಂಟೆಗಳಲ್ಲಿ ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಬೆಳಗಾವಿ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಹಾಸನ, ಕೋಲಾರ, ಮಂಡ್ಯ, ರಾಮನಗರ, ತುಮಕೂರು ಸೇರಿದಂತೆ ಒಂದು ಅಥವಾ ಎರಡು ಕಡೆ ಗುಡುಗು ಸಹಿತ ಸಿಡಿಲು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ರಾಜ್ಯ ಹವಾಮಾನ ಇಲಾಖೆ ತಿಳಿಸಿದೆ.  

ಯೆಲ್ಲೋ ಅಲರ್ಟ್

ಕರಾವಳಿಯ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಬೆಳಗಾವಿ, ಧಾರವಾಡ, ಹಾವೇರಿ, ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ಕೊಡಗು, ಮಂಡ್ಯ, ರಾಮನಗರ, ಶಿವಮೊಗ್ಗದಲ್ಲಿ ಮಳೆಯಾಗುವ ಸಾದ್ಯತೆ ಇದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಇದನ್ನೂ ಓದಿ: ಮುಂದಿನ ಏಳು ದಿನಗಳ ಕಾಲ ರಾಜ್ಯದಲ್ಲಿ ಭಾರೀ ಮಳೆ ಸಾಧ್ಯತೆ..! ಜಿಲ್ಲಾವಾರು ಹವಾಮಾನ ಈ ರೀತಿ ಇದೆ.. 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.
 

Trending News