Rain Alert: ರಾಜ್ಯದಲ್ಲಿ ಇನ್ನೂ 2 ದಿನ ವರುಣಾರ್ಭಟ: ಈ ಜಿಲ್ಲೆಗಳಲ್ಲಿ ಗುಡ್ಡ ಕುಸಿತದ ಭೀತಿ-ಹೈ ಅಲರ್ಟ್ ಘೋಷಿಸಿದ ಇಲಾಖೆ!

Karnataka Weather Update 27-05-2023: ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಬಿರುಗಾಳಿ ಸಹಿತ ಗುಡುಗು ಮಿಂಚಿನ ಮಳೆ ಸಾಧ್ಯತೆಯಿದೆ. ಗಾಳಿಯ ವೇಗವು ಗಂಟೆಗೆ 30-40 ಕಿ.ಮೀ ಇರಲಿದ್ದು, ಸಾಮಾನ್ಯಕ್ಕಿಂತ 2-3 ಡಿಗ್ರಿ ಸೆಲ್ಸಿಯಸ್‌ ಗಳಷ್ಟು ಉಷ್ಣಾಂಶ ಹೆಚ್ಚಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

Written by - Bhavishya Shetty | Last Updated : May 27, 2023, 07:30 AM IST
    • ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯ ಆರ್ಭಟ ಜೋರಾಗಲಿದೆ
    • ಮೇ 28ರ ಮುಂಜಾನೆವರೆಗೆ ಹಲವೆಡೆ ಮಳೆಯಾಗುವುದಾಗಿ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
    • ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಬಿರುಗಾಳಿ ಸಹಿತ ಗುಡುಗು ಮಿಂಚಿನ ಮಳೆ ಸಾಧ್ಯತೆಯಿದೆ.
Rain Alert: ರಾಜ್ಯದಲ್ಲಿ ಇನ್ನೂ 2 ದಿನ ವರುಣಾರ್ಭಟ: ಈ ಜಿಲ್ಲೆಗಳಲ್ಲಿ ಗುಡ್ಡ ಕುಸಿತದ ಭೀತಿ-ಹೈ ಅಲರ್ಟ್ ಘೋಷಿಸಿದ ಇಲಾಖೆ!  title=
Karnataka Rain

Karnataka Weather Update 27-05-2023: ಕಳೆದ ಕೆಲ ದಿನಗಳಿಂದ ರಾಜ್ಯದ ವಿವಿಧ ಭಾಗಗಳಲ್ಲಿ ಮಳೆಯ ಸಿಂಚನವಾಗುತ್ತಿದೆ, ಕರಾವಳಿ ಮತ್ತು ಉತ್ತರ ಒಳನಾಡಿನ ಕೆಲವು ಪ್ರದೇಶಳಲ್ಲಿ ಗುಡುಗು ಸಹಿತ ಮಳೆಯಾಗಿದೆ. ಇನ್ನೂ 2 ದಿನಗಳ ಕಾಲ ವರುಣನ ಅಬ್ಬರ ಇರಲಿದೆ. 

ಇದನ್ನೂ ಓದಿ: Surya Gochar 2023: ಸೂರ್ಯ-ಬುಧ ವಿಶೇಷ ಕೃಪೆಯಿಂದ ಈ ರಾಶಿಯವರಿಗೆ ಭಾರೀ ಧನಲಾಭ-ನಕ್ಷತ್ರದಂತೆ ಹೊಳೆಯುವುದು ಅದೃಷ್ಟ!

ಇನ್ನೊಂದೆಡೆ ಮುಂಗಾರು ಪೂರ್ವ ಮಳೆಯಿಂದ ಉಂಟಾದ ತೀವ್ರ ಪ್ರವಾಹದ ಬಿಕ್ಕಟ್ಟಿನಲ್ಲಿ ಕರ್ನಾಟಕ ಇನ್ನೂ ತತ್ತರಿಸಿದೆ. ಸದ್ಯ ಚಿಕ್ಕಮಗಳೂರು ಜಿಲ್ಲೆಯಲ್ಲಿ ಹೈ ಅಲರ್ಟ್ ಘೋಷಿಸಲಾಗಿದ್ದು, ಕೊಡಗು ಭೂಕುಸಿತದ ಭೀತಿಯನ್ನು ಎದುರಿಸುತ್ತಿದೆ.

ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯ ಆರ್ಭಟ ಜೋರಾಗಲಿದೆ. ಮೇ 28ರ ಮುಂಜಾನೆವರೆಗೆ ಹಲವೆಡೆ ಮಳೆಯಾಗುವುದಾಗಿ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಬಿರುಗಾಳಿ ಸಹಿತ ಗುಡುಗು ಮಿಂಚಿನ ಮಳೆ ಸಾಧ್ಯತೆಯಿದೆ. ಗಾಳಿಯ ವೇಗವು ಗಂಟೆಗೆ 30-40 ಕಿ.ಮೀ ಇರಲಿದ್ದು, ಸಾಮಾನ್ಯಕ್ಕಿಂತ 2-3 ಡಿಗ್ರಿ ಸೆಲ್ಸಿಯಸ್‌ ಗಳಷ್ಟು ಉಷ್ಣಾಂಶ ಹೆಚ್ಚಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ದೇಶದಲ್ಲಿ ತಾಪಮಾನ ಹೀಗಿರಲಿದೆ…

ಪಾಶ್ಚಿಮಾತ್ಯ ಅಡಚಣೆಯಿಂದಾಗಿ, ದೆಹಲಿ-ಎನ್‌ ಸಿ ಆರ್‌ ನಲ್ಲಿ ಹವಾಮಾನವು ಸಾಮಾನ್ಯವಾಗಿರುತ್ತದೆ. ಇದರಿಂದಾಗಿ ಹಲವೆಡೆ ಗುಡುಗು, ಸಿಡಿಲು ಸಹಿತ ತುಂತುರು ಮಳೆಯಾಗಿದೆ. ನಗರದಲ್ಲಿ 47.2 ಮಿ.ಮೀ ಮಳೆ ದಾಖಲಾಗಿದೆ ಎಂದು ಇಲಾಖೆ ಮಾಹಿತಿ ನೀಡಿದೆ.

ಹವಾಮಾನ ಇಲಾಖೆಯ ಪ್ರಕಾರ, ಇಂದು ಕೂಡ ದೆಹಲಿ-ಎನ್‌ ಸಿ ಆರ್, ರಾಜಸ್ಥಾನ, ಹರಿಯಾಣ ಮತ್ತು ಪಶ್ಚಿಮ ಯುಪಿ ಸೇರಿದಂತೆ ಪಶ್ಚಿಮ ಭಾರತದ ಹಲವು ಪ್ರದೇಶಗಳಲ್ಲಿ ಮಳೆಯಾಗಬಹುದು. ಮಳೆಯ ತೀವ್ರತೆ ಇರುವುದಿಲ್ಲ. ಈ ಮಳೆ ಸಿಂಚನವು ತಿಂಗಳ ಅಂತ್ಯದವರೆಗೆ ಮುಂದುವರಿಯುತ್ತದೆ ಎಂದು ಹೇಳಲಾಗುತ್ತಿದೆ.

ಖಾಸಗಿ ಹವಾಮಾನ ಸಂಸ್ಥೆ ಸ್ಕೈಮೆಟ್ ಪ್ರಕಾರ, ಶುಕ್ರವಾರ ಮೋಡ ಕವಿದ ವಾತಾವರಣ ಮತ್ತು ಮಳೆಯಿಂದಾಗಿ, ಗರಿಷ್ಠ ತಾಪಮಾನವು 5-6 ಡಿಗ್ರಿ ಸೆಲ್ಸಿಯಸ್ ಕುಸಿದು 37 ಡಿಗ್ರಿ ತಲುಪಿದೆ. ಪ್ರಸ್ತುತ, ಈ ತಾಪಮಾನವು ಮತ್ತಷ್ಟು ಕಡಿಮೆಯಾಗುವ ನಿರೀಕ್ಷೆ ಇಲ್ಲ. ಈ ಕಾರಣದಿಂದಾಗಿ ಜನರು ಬಿಸಿಲಿನ ತಾಪದಿಂದ ಕೊಂಚ ಪರಿಹಾರ ಪಡೆಯಬಹುದು.

ಹವಾಮಾನ ತಜ್ಞರ ಪ್ರಕಾರ, ಕಳೆದ 24 ಗಂಟೆಗಳಲ್ಲಿ ಉತ್ತರ ರಾಜಸ್ಥಾನ ಮತ್ತು ಪಶ್ಚಿಮ ಬಂಗಾಳದ ಕೆಲವು ಭಾಗಗಳಲ್ಲಿ ಭಾರೀ ಮಳೆಯಾಗಿದೆ. ಉತ್ತರ ರಾಜಸ್ಥಾನದ ಒಂದೆರಡು ಭಾಗಗಳಲ್ಲಿ ಲಘುವಾಗಿ ಸಾಧಾರಣ ಮಳೆಯಾಗಿದೆ. ಹರಿಯಾಣ, ರಾಜಸ್ಥಾನ, ಉತ್ತರ ಪ್ರದೇಶ ಮತ್ತು ದೆಹಲಿಯ ಹಲವು ಭಾಗಗಳಲ್ಲಿ ಬಿರುಗಾಳಿ ಸಹ ಎದ್ದಿತ್ತು. ಮಧ್ಯ ಮಹಾರಾಷ್ಟ್ರ ಮತ್ತು ಲಕ್ಷದ್ವೀಪದ ಒಂದೆರಡು ಕಡೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗಿದೆ. ಕರಾವಳಿ ಒಡಿಶಾ, ಛತ್ತೀಸ್‌ ಗಢ, ಉತ್ತರ ಪ್ರದೇಶ, ಹರಿಯಾಣ, ಪಂಜಾಬ್, ದೆಹಲಿ, ರಾಜಸ್ಥಾನ, ಕರಾವಳಿ ಆಂಧ್ರಪ್ರದೇಶ, ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳು, ತಮಿಳುನಾಡು ಒಳನಾಡು ಮತ್ತು ಕೇರಳದ ಕೆಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗಿದೆ.

ಇದನ್ನೂ ಓದಿ: Today Horoscope: ಈ ರಾಶಿಯವರಿಗೆ ಇಂದು ಶನಿಕೃಪೆ: ಅಂದುಕೊಂಡ ಕಾರ್ಯದಲ್ಲಿ ಯಶಸ್ಸು-ವ್ಯಾಪಾರಾಭಿವೃದ್ಧಿ ಖಚಿತ!

ಇಂದಿನ ಅಪ್ಡೇಟ್ ಹೀಗಿದೆ…

ಏಜೆನ್ಸಿಯ ಪ್ರಕಾರ, ಇಂದು ಪಂಜಾಬ್, ಹರಿಯಾಣ, ಉತ್ತರ ರಾಜಸ್ಥಾನ, ದೆಹಲಿ NCR ಹವಾಮಾನ ಅಪ್‌ಡೇಟ್ ಮತ್ತು ಉತ್ತರ ಪ್ರದೇಶದ ಕೆಲವು ಭಾಗಗಳಲ್ಲಿ ಧೂಳಿನಿಂದ ಕೂಡಿದ ಗಾಳಿಯಿಂದ ಹಗುರದಿಂದ ಸಾಧಾರಣ ಮಳೆಯಾಗಲಿದೆ. ಈಶಾನ್ಯ ಭಾರತ ಮತ್ತು ಸಿಕ್ಕಿಂನಲ್ಲಿ ಒಂದು ಅಥವಾ ಎರಡು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಕೊಂಕಣ, ಗೋವಾ ಮತ್ತು ಮಧ್ಯ ಮಹಾರಾಷ್ಟ್ರದ ಒಂದೆರಡು ಸ್ಥಳಗಳಲ್ಲಿ ಲಘು ಮಳೆಯಾಗುವ ನಿರೀಕ್ಷೆಯಿದೆ ಎಂದು ವರದಿ ಹೇಳಿದೆ.

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 

Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News