ಬೆಂಗಳೂರು: ರಾಜ್ಯ ಸರಕಾರವು ಖಾಸಗಿ ಹೂಡಿಕೆದಾರರಿಗೆ ಆಗಬಹುದಾದ ಅಪಾಯವನ್ನು ಕಡಿಮೆ ಮಾಡಲೆಂದು ಮತ್ತು ಯೋಜನೆಯ ಆರ್ಥಿಕ ಕಾರ್ಯಸಾಧ್ಯತೆಯನ್ನು ಹೆಚ್ಚಿಸುವ ಉದ್ದೇಶಗಳಿಂದ ಮಾತ್ರ ಸಬ್ಸಿಡಿ ಕೊಡುತ್ತದೆ. ಯೋಜಿತ ಹೂಡಿಕೆಗಿಂತ ಹೆಚ್ಚು ಸಬ್ಸಿಡಿ ಕೊಡುತ್ತ ಹೋದರೆ ಕೈಗಾರಿಕಾ ಯೋಜನೆಗಳ ಆರ್ಥಿಕ ಕಾರ್ಯಸಾಧ್ಯತೆಯ ಬಗ್ಗೆಯೇ ಪ್ರಶ್ನೆಗಳು ಏಳುತ್ತವೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.
ರಾಜ್ಯ ಸರಕಾರವು ಕೈಗಾರಿಕಾಸ್ನೇಹಿ ವಾತಾವರಣ ಸೃಷ್ಟಿಸಲು ಆದ್ಯತೆ ಕೊಟ್ಟಿದ್ದು, ಖಾಸಗಿ ಉದ್ದಿಮೆಗಳನ್ನು ಮುಕ್ತವಾಗಿ ಸ್ವಾಗತಿಸಲಾಗುತ್ತಿದೆ. ಈ ಮೂಲಕ ಕರ್ನಾಟಕವು ನಾವೀನ್ಯತೆ ಮತ್ತು ಅವಕಾಶಗಳ ಆಡುಂಬೊಲವಾಗಿ ಇರುವಂತೆ ನೋಡಿಕೊಳ್ಳಲಾಗುತ್ತಿದೆ ಎಂದು ಅವರು ವಿವರಿಸಿದ್ದಾರೆ.
ಸರಕಾರ ಎಂದಮೇಲೆ ಎಲ್ಲವೂ ತೆರಿಗೆದಾರರ ಹಣವನ್ನೇ ಅವಲಂಬಿಸಿ ನಡೆಯುತ್ತದೆ. ಅವರ ಸಂಪನ್ಮೂಲಗಳ ಹಿತವನ್ನೂ ಕಾಯಬೇಕಾದ್ದು ನಮ್ಮ ಕೆಲಸವಾಗಿದೆ. ರಾಜ್ಯಕ್ಕೆ ದೀರ್ಘಾವಧಿ ಲಾಭ ತಂದುಕೊಡುವಂತಹ ನಿರ್ಧಾರಗಳನ್ನು ಕೈಗೊಳ್ಳಲು ನಾವು ಬದ್ಧರಾಗಿದ್ದೇವೆ. ಉದ್ಯಮಗಳ ಬೆಳವಣಿಗೆಗೆ ಪೂರಕವಾದ ವಾತಾವರಣ ಸೃಷ್ಟಿ, ಪಾರದರ್ಶಕ ವ್ಯವಸ್ಥೆ ಮತ್ತು ಸಕಾರಾತ್ಮಕ ಪರಿಸರ ನಿರ್ಮಾಣ ನಮ್ಮ ಗುರಿ ಎಂದು ಪಾಟೀಲ ಪ್ರತಿಪಾದಿಸಿದ್ದಾರೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.